ಬೆಂಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ತಿಂಗಳ 10ರೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಅವಿರತ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಕಾಲದಲ್ಲಿ ಗೌರವಧನ ಪಾವತಿಯಾಗದೆ ಬಹುತೇಕ ಮಂದಿ ಪರದಾಡುತ್ತಿದ್ದಾರೆ. ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿರುವ ಬಗ್ಗೆ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ದಿನೇಶ್ ಗುಂಡೂರಾವ್, ಅವರು ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆರೋಗ್ಯ ಕಾರ್ಯಕರ್ತೆಯರಾಗಿರುವ ಆಶಾಗಳ ಮಾಸಿಕ ಗೌರವಧನವನ್ನು ತಿಂಗಳ 10 ರೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಸಚಿವರು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
