ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕಂದಾಯ ಇಲಾಖೆಯಿಂದ ಪ್ರತ್ಯೇಕ

ಬೆಂಗಳೂರು, ನ.04: ಇನ್ಮುಂದೆ ತಾಲ್ಲೂಕು ಮಟ್ಟದಲ್ಲಿ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಕಂದಾಯ ಇಲಾಖೆಯಿಂದ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯವನ್ನು ತಾಲ್ಲೂಕು ಹಂತದಲ್ಲಿ ಸ್ವತಂತ್ರವಾಗಿ ನಿರ್ವಹಿಸಲು ಕಂದಾಯ ಇಲಾಖೆಯಿಂದ ಪ್ರತ್ಯೇಕಗೊಳಿಸಿ ಆದೇಶಿಸಿದೆ. ಈ ಮೂಲಕ ಇನ್ಮುಂದೆ ತಾಲ್ಲೂಕು ಮಟ್ಟದಲ್ಲಿ ತ್ವರಿತ ಪ್ರಗತಿ ಕಾಣಲಿದೆ.

ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವ ಸರ್ಕಾರದ ಗುರಿ:

ಈ ಸಂಬಂಧ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು, ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದಾರೆ. ಅದರಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಸರ್ಕಾರದ ಮಹಾತ್ಮಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿರುವ ಒಟ್ಟು 15279900 ಪಡಿತರ ಚೀಟಿಗಳ (ಒಟ್ಟು ಆದ್ಯತಾ ಪಡಿತರ ಚೀಟಿ ಸಂಖ್ಯೆ: 11695018, ಒಟ್ಟು ಆದ್ಯತೇತರ ಪಡಿತರ ಚೀಟಿ ಸಂಖ್ಯೆ:2496451 ಮತ್ತು ಅಂತ್ಯೋದಯ ಅನ್ನ ಪಡಿತರ ಚೀಟಿ ಸಂಖ್ಯೆ:1088431), ಒಟ್ಟು 52303799 ಫಲಾನುಭವಿಗಳಿಗೆ ಪಡಿತರವನ್ನು ವಿತರಿಸುವ ಮೂಲಕ ಹಸಿವು ಮುಕ್ತ ಕರ್ನಾಟಕ ರಾಜ್ಯವನ್ನಾಗಿಸಬೇಕೆಂಬ ಸರ್ಕಾರದ ಗುರಿಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ವಿವರಣೆ ನೀಡಿದ್ದಾರೆ.

zameer ahmed; ಸಿಎಂ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದುನೇ ಸಿಎಂ: ಸಚಿವ ಜಮೀರ್ ಅಹಮದ್

ಇಲಾಖೆಯು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಮಟ್ಟದಲ್ಲಿ ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ಸಚಿವರು, ಪ್ರತ್ಯೇಕ ಕಾರ್ಯದರ್ಶಿಗಳು, ಪ್ರತ್ಯೇಕ ಆಯುಕ್ತಾಲಯ ಹೊಂದಿದ್ದು, ಜಿಲ್ಲಾ ಮಟ್ಟದಲ್ಲೂ ಸಹ ಉಪನಿರ್ದೇಶಕರು/ಜಂಟಿ ನಿರ್ದೇಶಕರು ಹುದ್ದೆಗಳನ್ನು ಹೊಂದಿದ್ದು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿದೆ ಆದರೆ ತಾಲ್ಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ.

ತಾಲ್ಲೂಕು ಮಟ್ಟದಲ್ಲಿ ಅಧಿಕಾರಿ ನೇಮಕಕ್ಕೆ ಸಚಿವ ಸೂಚನೆ:

ತಾಲ್ಲೂಕು ಹಂತದಲ್ಲಿ ಕಂದಾಯ ಇಲಾಖೆಯಿಂದ ಬೇರ್ಪಡಿಸಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವಂತೆ ಮಾಡುವುದು ಅವಶ್ಯಕವೆಂದು ಹಾಗೂ ಪ್ರತಿ ತಾಲ್ಲೂಕಿಗೆ 01 ಸಹಾಯಕ ನಿರ್ದೇಶಕರ ಹುದ್ದೆಯನ್ನು ಸೃಜಿಸುವ ಮೂಲಕ ಸದರಿ ಅಧಿಕಾರಿಯವರನ್ನು ತಾಲ್ಲೂಕು ಮಟ್ಟದ ಅಧಿಕಾರಿಯನ್ನಾಗಿಸಿ ಇಲಾಖೆಯ ತಾಲ್ಲೂಕು ಮಟ್ಟದ ಜವಾಬ್ದಾರಿಯನ್ನು ನಿರ್ವಹಿಸುವಂತೆ ಮಾಡುವುದು ಅವಶ್ಯಕವೆಂದು ಉಲ್ಲೇಖ(1)ರ ಸಭೆಗಳಲ್ಲಿ ಮಾನ್ಯ ಸಚಿವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!