ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನ ನೀಡಲು ಕುಟುಂಬಸ್ಥರ ನಿರ್ಧಾರ?
ಹಾವೇರಿ: ಉಕ್ರೇನ್‌ನಲ್ಲಿ ಮೃತವಾಗಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹವನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾನ ನೀಡಲು ಕುಟುಂಬಸ್ಥರು ನಿರ್ಧ ರಿಸಿದ್ದಾರೆ ಎಂದು ಹೇಳಲಾಗಿದೆ. ಸೋಮವಾರ ನಸುಕಿನ ಜಾವ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ನವೀನ್ ಮೃತ ದೇಹ ಆಗಮಿಸಲಿದೆ. ಬೆಂಗಳೂರಿ ನಿಂದ ನೇರವಾಗಿ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ನಂತರ ನವೀನ್ ಮೃತದೇಹಕ್ಕೆ ಅಂತಿಮ ವಿಧಿವಿಧಾನಗಳನ್ನು ಸಲ್ಲಿಸಿದ ಬಳಿಕ, ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಮೃತದೇಹವನ್ನು ದಾನ ನೀಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ಗ್ಯಾನಗೌಡರ್, “ಮಗನ ಮೃತದೇಹ ಸೋಮವಾರ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂತಿಮವಾಗಿ ಸಲ್ಲಿಸ ಬೇಕಾದ ಪೂಜೆಗಳನ್ನು ಮಾಡುವ ಕುರಿತು ಗ್ರಾಮದ ಹಿರಿಯರು ನಿರ್ಧರಿಸಲಿದ್ದಾರೆ. ಸೋಮವಾರ ಸಂಜೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ತದ ನಂತರ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಪಾರ್ಥಿವ ಶರೀರವನ್ನು ದಾನವಾಗಿ ನೀಡುತ್ತಿದ್ದೇವೆ,” ಎಂದು ಹೇಳಿದರು.
“ಮಗ ನವೀನ್‌ಗೆ ವೈದ್ಯಕೀಯ ಲೋಕದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಮಹಾದಾಸೆ ಇತ್ತು, ಆದರೆ ಅದು ಸಾಧ್ಯವಾಗಲಿಲ್ಲ. ಮಗ ಪಾರ್ಥಿವ ಶರೀರ ಬೇರೆ ವೈದ್ಯ ಕೀಯ ವಿದ್ಯಾರ್ಥಿಗಳಿಗೆ ಸಹಾಯ ಆಗಲಿ ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ,” ಎಂದು ತಂದೆ ಶೇಖರಪ್ಪ ಗ್ಯಾನಗೌಡರ್ ಹೇಳಿದ್ದಾರೆ. ಇಂದು ಬೆಳಗ್ಗೆ ಮೃತ ನವೀನ್ ಮನೆಗೆ ರಾಣೆಬೆನ್ನೂರು ಕ್ಷೇತ್ರದ ಶಾಸಕ ಅರುಣ್‌ಕುಮಾರ್ ಪೂಜಾರ್ ಭೇಟಿ ನೀಡಿ, ಮೃತದೇಹವನ್ನು ದಾನ ಮಾಡಬೇಕಾ ಅಥವಾ ಅಂತ್ಯಕ್ರಿಯೆ ಮಾಡಬೇಕಾ ಅನ್ನುವ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ನಡೆಸಲಿದ್ದಾರೆ. ನವೀನ್ ಮೃತಪಟ್ಟು 21 ದಿನ ಆಗುತ್ತಿರುವ ಹಿನ್ನಲೆ ಮೃತದೇಹವನ್ನು ಆಸ್ಪತ್ರೆಗೆ ದಾನ ಮಾಡಲು ಸಾಧ್ಯವೇ ಅನ್ನುವುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮೃತದೇಹ ಆಗಮಿಸಿದ ನಂತರ ವೈದ್ಯರಿಂದ ತಪಾಸಣೆ ನಡೆಸಿ ನಂತರ ದಾನ ಮಾಡುವುದಾ ಅಥವಾ ಅಂತ್ಯಕ್ರಿಯೆ ಮಾಡುವುದಾ ಎಂಬ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಮೃತಪಟ್ಟ ನವೀನ್ ಕುಟುಂಬಕ್ಕೆ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಅನ್ನು ಕೂಡ ವಿತರಿಸಿದ್ದರು. ಇನ್ನು ಪಾರ್ಥಿವ ಶರೀರ ತರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಸಿದ್ದರಾಮಯ್ಯ ಕೂಡ ತಿಳಿಸಿದ್ದರು.