ಪೊಲೀಸರು ಬಾಲಕನ ಮೇಲೆ ಯಾವುದೇ ಹಲ್ಲೆ ನಡೆಸಿಲ್ಲ.! ಇದೊಂದು ಆಕಸ್ಮಿಕ ಘಟನೆ – ಎಸ್ ಪಿ ರಿಷ್ಯಂತ್ ಸ್ಪಷ್ಟನೆ

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಮುಖ್ಯಮಂತ್ರಿ ಅವರ ಗ್ರಾಮ ವಾಸ್ತವ್ಯ ಉದ್ಘಾಟನಾ ಸಮಾರಂಭದಲ್ಲಿ ಬಾಲಕನೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ರಿಷ್ಯಂತ್ ಸ್ಪಷ್ಟನೆ ನೀಡಿದ್ದು, ಇದೊಂದು ಆಕಸ್ಮಿಕ ಘಟನೆಯಾಗಿದ್ದು, ಬಾಲಕನ ಮೇಲೆ ಯಾವುದೇ ಹಲ್ಲೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿರುವ ಕಾರಣ ಬಂದೋಬಸ್ತ್ ಕರ್ತವ್ಯ ನಿರ್ವಶಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾರೆಟ್ ಕ್ಯಾಪ್ ನಲ್ಲಿನ ಪಿನ್ನೊಂದು ಬಾಲಕನಿಗೆ ತಗುಲಿ ತರಚಿದ ಗಾಯವಾಗಿದ್ದು, ಈ ಬಗ್ಗೆ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸ್ ಬಾಲಕನ ಮೇಲೆ ಯಾವುದೇ ಹಲ್ಲೆ ಮಾಡಿರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಆದರೆ, ಕೆಲವೊಂದು ಮಾಧ್ಯಮಗಳಲ್ಲಿ ಘಟನೆಯನ್ನು ಬೇರೆ ಬೇರೆ ರೀತಿಯಾಗಿ ಬಿಂಬಿಸಲಾಗಿದೆ. ಮಾಧ್ಯಮಗಳಲ್ಲಿ ಬಿಂಬಿಸುತ್ತಿರುವ ರೀತಿಯಲ್ಲಿ ಯಾವುದೇ ಘಟನೆ ಸಂಭಾವಿಸಿರುವುದಿಲ್ಲ. ಘಟನೆ ಕೇವಲ ಆಕಸ್ಮಿಕವಾಗಿ ಘಾಟಿಸಿರುವುದೇ ವಿನಃ ಬೇರೆ ಯಾವುದೇ ದುರುದ್ದೇಶದಿಂದ ಅಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.