ಕಣಿವಿಗೆ ಬಸ್ ಬಿದ್ದು 12 ಸಾವು

ಕಣಿವಿಗೆ ಬಸ್ ಬಿದ್ದು 12 ಸಾವು

ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ಬಸ್ ಕಣಿವೆಗೆ ಉರುಳಿ 12 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ 25 ಮಂದಿ ಗಾಯಗೊಂಡಿದ್ದಾರೆ.
ಲೋನಾವಾಲಾ ಬಳಿಯ ಖಂಡಾಲ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಣಿವೆಗೆ ಉರುಳಿದೆ. ಅಪಘಾತಕ್ಕೀಡಾದ ಬಸ್ ಮುಂಬೈನಿಂದ ಪುಣೆಗೆ ತೆರಳುತ್ತಿತ್ತು ಎಂದು ‘ಇಂಡಿಯಾ ಟುಡೆ ವರದಿ ಮಾಡಿದೆ.
ಲಭ್ಯವಿರುವ ಮಾಹಿತಿ ಪ್ರಕಾರ, ಬೆಳಗಿನ ಜಾವ 4:30ರ ಸುಮಾರಿಗೆ ಖಂಡಾಲ ಘಾಟ್‌ನ ಶಿಂಡ್ರೋಬಾ ದೇವಾಲಯದ ಬಳಿ ಡ್ರೈವರ್ ನಿಯಂತ್ರಣ ಕಳೆದುಕೊಂಡ ಬಸ್ ತಡೆಗೋಡೆಗೆ ಗುದ್ದಿ 500 ಅಡಿ ಆಳದ ಕಣಿವೆಗೆ ಉರುಳಿದೆ. ಪೊಲೀಸ್ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!