ದಾವಣಗೆರೆ: ಜಿಲ್ಲೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ನೊಂದಣಿ ಇಲ್ಲದೇ ಪದವಿ ಪೂರ್ವ ಶಿಕ್ಷಣದ ಕೋಚಿಂಗ್ ಸೆಂಟರ್‍ಗಳನ್ನು ನಡೆಸಲು ಉದ್ದೇಶಿಸಿದ ಹಾಗೂ ಈಗಾಗಲೇ ನಡೆಸುತ್ತಿರುವ ಸಂಸ್ಥೆಗಳು ಕಡ್ಡಾಯವಾಗಿ ನೊಂದಾಯಿಸಿಕೊಳ್ಳಬೇಕು, ತಪ್ಪಿದ್ದಲ್ಲಿ ಅಂತಹ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪದವಿ ಪೂರ್ಣ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
