ಬೆಂಗಳೂರು: ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಾಳೆಯಿಂದ ಆರಂಭವಾಗಬೇಕಿದ್ದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿಕೆ ಸಾಧ್ಯತೆಯಿದೆ. ಗೃಹಜ್ಯೋತಿ ಯೋಜನೆಗೆ 18 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ ಎಂದು ತಿಳಿದುಬಂದಿದೆ.
ಇ ಗವರ್ನೆನ್ಸ್ (ಸೇವಾ ಸಿಂಧು ಗೆ ಸಿದ್ದತೆ) ಹಾಗೂ ಗೊಂದಲಗಳ ನಿವಾರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
