ಜನಸಂಖ್ಯೆ ನಿಯಂತ್ರಣ ಅಸಾಧ್ಯವಾದರೇ ಸಮಾಜದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ: ಶಿವಾನಂದ ಕಾಪಶಿ

ಜನಸಂಖ್ಯೆ ನಿಯಂತ್ರಣ ಅಸಾಧ್ಯವಾದರೇ ಸಮಾಜದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ: ಶಿವಾನಂದ ಕಾಪಶಿ

 ದಾವಣಗೆರೆ;  ಜನಸಂಖ್ಯೆ ಹೆಚ್ಚಳದಿಂದ ಸಮಾಜದ ಆರೋಗ್ಯ, ಜನರ ಮೂಲ ಸೌಕರ್ಯಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಕುವೆಂಪು ಭವನದಲ್ಲಿ ಜರುಗಿದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಜುಲೈ.11 ರಂದು ಪ್ರತಿ ವರ್ಷವು ವಿಶ್ವ ಜನಸಂಖ್ಯಾ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರಪಂಚದ ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿ ಮೊದಲನೇ ಸ್ಥಾನದಲ್ಲಿದೆ. 1947ರಲ್ಲಿ ಶಿಶು ಮರಣ, ತಾಯಿ ಮರಣ, ಜನ ಸಾಮಾನ್ಯರ ಸಾವಿನ ಪ್ರಮಾಣ ಹೆಚ್ಚಾಗಿತ್ತು. ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಸೌಲಭ್ಯಗಳಿಂದ ಜನರು ಆರೋಗ್ಯದಲ್ಲಿ ಸುಧಾರಣೆಯಾಗಿ ಮರಣ ಪ್ರಮಾಣ ಗಣನೀಯ ಪ್ರಮಾಣದಲ್ಲಿ ತಗ್ಗಿದೆ ಎಂದರು.

ಜನಸಂಖ್ಯೆ ನಿಯಂತ್ರಣ ಅಸಾಧ್ಯವಾದರೇ ಸಮಾಜದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ: ಶಿವಾನಂದ ಕಾಪಶಿ

ಮನುಷ್ಯನ ಹಾಗೆ ಜಗತ್ತಿನಲ್ಲಿ ಪ್ರಾಣಿ, ಪಕ್ಷಿ, ಗಿಡ ಮರಗಳಿಗೂ ಬದುಕುವ ಹಕ್ಕಿದೆ, ಆದರೆ ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆ ಹೆಚ್ಚಳದಿಂದ ವಾತಾವರಣ ಹಾಗೂ ಜೈವಿಕ ಸಂಪನ್ಮೂಲ, ಆರೋಗ್ಯ, ಉತ್ಪಾದನೆ ಮೇಲೂ ದುಷ್ಪರಿಣಾಮ ಬೀರಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರವು ಹಲವಾರು ಯೋಜನೆಗಳನ್ನು ಅನುಷ್ಟಾನ ಗೊಳಿಸಿದ್ದು ಜನರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್ ಮಾತನಾಡಿ ಜನಸಂಖ್ಯೆಯನ್ನು ನಿಯಂತ್ರಿಸಿ, ಆರೋಗ್ಯಕರ, ದಕ್ಷ ದೇಶವನ್ನಾಗಿಸಲು ಕುಟುಂಬ ಕಲ್ಯಾಣ ಯೋಜನೆಗಳ ಪಾತ್ರ ಮುಖ್ಯವಾಗಿರುತ್ತದೆ. ಜನಸಂಖ್ಯೆ ಹೆಚ್ಚಳದಿಂದ ಪ್ರಕೃತಿ ಅಸಮತೋಲನ, ರೋಗಗಳು, ಜನರಿಗೆ ಮೂಲ ಸೌಕರ್ಯಗಳ ಕೊರತೆ, ಕೊಳಗೇರಿಗಳ ನಿರ್ಮಾಣ ಹೆಚ್ಚಾಗುತ್ತವೆ ಎಂದರು.

ದೇಶದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ಮಾಡುತ್ತಿದ್ದು ಭಾರತವು ಜನಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಜನಸಂಖ್ಯೆ ನಿಯಂತ್ರಣದ ಬಗ್ಗೆ ವಿದ್ಯಾರ್ಥಿಗಳು ಸಮಾಜದಲ್ಲಿ  ಹೆಚ್ಚಿನ ರೀತಿಯಲ್ಲಿ ಜನರಿಗೆ ಅರಿವು ಮೂಡಿಸಬೇಕು ಎಂದರು.ಇದೇ ಸಂದರ್ಭದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಜಾಗೃತಿ ಜಾಥಾ: ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಜನ ಜಾಗೃತಿ ಜಾಥಾಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಜಾಥಾವು ಚಿಕ್ಕ ಕುಟುಂಬ, ಚೊಕ್ಕ ಕುಟುಂಬ,  ಯೋಜಿತ ಪರಿವಾರ, ಸುಖ ಅಪಾರ,  ಹೆಣ್ಣಿರಲಿ ಗಂಡಿರಲಿ ಮಗು ಒಂದೇ ಇರಲಿ ಎಂಬ ಘೋಷಣೆಗಳೊಂದಿಗೆ, ತರಳಬಾಳು ಬಿ.ಇಡಿ ಕಾಲೇಜು, ಹದಡಿ ರಸ್ತೆ, ವಿದ್ಯಾನಗರ ಮೂಲಕ ಸಾಗಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಕಾರಾಧ್ಯ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ನಟರಾಜ್, ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಮುರುಳೀಧರ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ್ ಪಟಿಲಿ, ತರಳಬಾಳು ಬಿ.ಇಡಿ ಮಹಾವಿದ್ಯಾಲಯದ ಪ್ರಾಶುಪಾಲರಾದ ಡಾ.ಕೆ.ಟಿ ನಾಗರಾಜ್ ನಾಯ್ಕ್, ಮಿಥುನ್, ಆಶಾ ಕಾರ್ಯಕರ್ತೆಯರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!