ದಾವಣಗೆರೆ: ಸಾರ್ವಜನಿಕರಿಂದ ಯಾವುದೂ ದೂರುಗಳು ಬಾರದಂತೆ ಕೆಲಸ ಮಾಡುವುದಾದರೆ ಮಾಡಿ. ಇಲ್ಲದಿದ್ದರೆ ಕಿತ್ಕೊಂಡ್ ಹೋಗ್ರಿ ಎಂದು ಜಿಲ್ಲಾ ಉಸ್ತುವಾರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾಗಿದ್ದ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಸಿ ಮಾತನಾಡಿದ ಅವರು, ತಹಶೀಲ್ದಾರ್ ಕಚೇರಿ, ಮಹಾನಗರ ಪಾಲಿಕೆ, ಉಪ ವಿಭಾಗಾಧಿಕಾರಿ ಕಚೇರಿ, ನೋಂದಣಾಧಿಕಾರಿಗಳ ಕಚೇರಿ ಹೀಗೆ ಸರ್ಕಾರಿ ಕಚೇರಿಗಳಲ್ಲಿ ಜನರಿಂದ ದೂರು ಬರಬಾರದು. ಆ ರೀತಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಮತ್ತಷ್ಟು ಅನುದಾನ ತಂದು ಜಿಲ್ಲೆಯನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
