ಧೂಮಪಾನ ವಲಯಗಳಿಗೆ ಅರ್ಜಿ ಆಹ್ವಾನ ;

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್, ಬಾರ್, ರೆಸ್ಟೋರೆಂಟ್, ಕ್ಲಬ್ ಹಾಗೂ ಇತರೆ ಸ್ಥಳಗಳಲ್ಲಿ ಅನಧಿಕೃತವಾಗಿ ಸ್ಥಾಪಿಸಿರುವ ಧೂಮಪಾನ ವಲಯಗಳನ್ನು ಕೂಡಲೇ ತೆರವುಗೊಳಿಸಲು ಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.
ಅಧಿಕೃತವಾಗಿ ಮತ್ತು ಕಾನೂನಿನ್ವಯ ಧೂಮಪಾನ ವಲಯಗಳನ್ನು ಸ್ಥಾಪಿಸಲು ಇಚ್ಚಿಸುವ ಉದ್ದಿಮೆದಾರರು ಪಾಲಿಕೆಯಿಂದ ನಿರಪೇಕ್ಷಣ ಪತ್ರವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಬೇಕು.
ನಗರದಾದ್ಯಂತ ಕೋಪ್ಟಾ-2023ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿರುವ ಉದ್ದೇಶದಿಂದ ಅನಧಿಕೃತವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ತಂಬಾಕು ಮಾರಾಟ ಮಾಡುವುದು ಕಂಡುಬಂದಲ್ಲಿ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಲಾಗುವುದು.