ಪುನೀತ್ ರಾಜಕುಮಾರ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್

ಮೈಸೂರು: ದಿವಂಗತ ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯದಿಂದ ಘೋಷಣೆ ಮಾಡಲಾಗಿದೆ. ಈ ಘೋಷಣೆ ಮೂಲಕ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಮೈಸೂರು ವಿವಿ ಉಡುಗೊರೆ ನೀಡಿದಂತಾಗಿದೆ. ಪುನೀತ್ ರಾಜ್‌ಕುಮಾರ್ ಕುಟುಂಬದವರನ್ನು ಸಂಪರ್ಕ ಮಾಡಿದ್ದೇವೆ. ಪುನೀತ್ ಪತ್ನಿ ಅಶ್ವಿನಿಯವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೋ. ಹೇಮಂತ್ ಕುಮಾರ್ ಹೇಳಿದ್ದಾರೆ.

ಮಾರ್ಚ್ 22ಕ್ಕೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ದಿನ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಚಲನಚಿತ್ರ ನಟ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಡಾಕ್ಟರೇಟ್, ಹಿರಿಯ ವಿಜ್ಞಾನಿ ಡಾ. ವಿ.ಎಸ್. ಅತ್ರೆ ಮತ್ತು ಜನಪದ ಗಾಯಕ ಮಳ್ಳವಳ್ಳಿ ಮಹಾದೇವಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದರು. ಘಟಿಕೋತ್ಸವದಂದು 28581 ಅಭ್ಯರ್ಥಿಗಳಿಗೆ ಪದವಿ ಪ್ರದಾನ, 5677 ಅಭ್ಯರ್ಥಿ ಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪ್ರೋ. ಹೇಮಂತ್ ಕುಮಾರ್ ಹೇಳಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!