ಪೊಲೀಸ್ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ದೂರವಾಣಿ ಸಂಖ್ಯೆಯ ಬೋರ್ಡ್ ಕಡ್ಡಾಯ- ಡಿಜಿ/ಐಜಿಪಿ ಆದೇಶ

ಬೆಂಗಳೂರು: ರಾಜ್ಯದ ಪ್ರತಿ ಪೊಲೀಸ್ ಠಾಣೆ ಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಬೋರ್ಡ್ ಕಡ್ಡಾಯಗೊಳಿಸಿ ರಾಜ್ಯ ಡಿಜಿ ಮತ್ತು ಐಜಿಪಿ ಡಾ. ಅಲೋಕ್ ಮೋಹನ್ ಆದೇಶಿಸಿದ್ದಾರೆ.
ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಯಾರಾದರೂ ಠಾಣೆಗೆ ಬಂದೂ ದೂರು ಅಥವಾ ಇನ್ನಿತರೆ ಸಮಸ್ಯೆಗಳ ಬಗ್ಗೆ ದೂರು ಸ್ವೀಕರಿಸಲು ನಿರಾಕರಿಸಿದರೆ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳನ್ನು ಒಳಗೊಂಡ ನಾಮಫಲಕ ಅಳವಡಿಸುವುದನ್ನು ಕಡ್ಡಾಯಗೊಳಿಸಿದ್ದಾರೆ,
ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಪಿ, ಎಎಸ್ ಪಿ, ಡಿವೈಎಸ್ಪಿ ಗಳ ಸಂಪರ್ಕ ಸಂಖ್ಯೆ, ಕಮೀಷನರೇಟ್ ವ್ಯಾಪ್ತಿಯಲ್ಲಿ ಕಮೀಷನರ್, ಎಸಿಪಿ, ಡಿಸಿಪಿಗಳ ದೂರವಾಣಿ ಸಂಖ್ಯೆಗಳನ್ನು ಆಯ್ದ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಫಲಕದಲ್ಲಿ ಅಳವಡಿಸುವಂತೆ ಸೂಚಿಸಿದ್ದಾರೆ.
ದಿನಾಂಕ 20-06-2023ರ ಒಳಗಾಗಿ ಎಲ್ಲಾ ನಗರಗಳಲ್ಲಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಅಳವಡಿಸಿದ ಬಗ್ಗೆ ಈ ಕಚೇರಿಗೆ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದಾರೆ.