ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದು, ಈ ಕೂಡಲೇ ಜಾರಿಯಾಗುವಂತೆ ರಾಜ್ಯಾದ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಲ್ಲಿಯವರೆಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಇಲ್ಲಿಗೆ ಅಂತ್ಯವಾಗಿದ್ದು, ಇನ್ನೂ ಮುಂದೆ ಬಿ.ವೈ. ವಿಜಯೇಂದ್ರ ಅವರು ಅಧಿಕಾರ ವಹಿಸಿಕೊಳ್ಳಲ್ಲಿದ್ದಾರೆ.
ಇದಕ್ಕೂ ಮೊದಲು ಬಿಜೆಪಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದ್ದು, ಅವರ ಪುತ್ರ ವಿಜಯೇಂದ್ರ ಅವರಿಗೆ ಅಧಿಕಾರ ಕೊಡುವ ಮೂಲಕ ರಾಜ್ಯದ ಜನರಲ್ಲಿ ಅಡಗಿದ್ದ ಈ ಅಳುಕಿಗೆ ತೆರೆ ಎಳೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಅಲ್ಲದೇ ಇದರಿಂದ ಶೋಭ ಕರದ್ಲಂಜೆ ಅವರಿಗೆ ಈ ಹುದ್ದೆ ತಪ್ಪಿದೆ.