ಬಿಪಿಎಲ್, ಎಪಿಎಲ್ ಎಂಬ ತಾರತಮ್ಯವಿಲ್ಲದೆ ಕೊವಿಡ್ ಮೃತ ಕುಟುಂಬಕ್ಕೆ ಪರಿಹಾರಕ್ಕಾಗಿ ಸಿಎಂ ಬಳಿ‌ ಮನವಿ – ಬೈರತಿ ಬಸವರಾಜ್

 

ದಾವಣಗೆರೆ: ಕೋವಿಡ್‍ನ ಮೊದಲ ಮತ್ತು ಎರಡನೆ ಅಲೆಯಲ್ಲಿ ಬಿಪಿಎಲ್, ಎಪಿಎಲ್ ಎಂಬ ತಾರತಮ್ಯವಿಲ್ಲದೆ, ಕೋವಿಡ್-19 ಸೋಂಕಿನಿಂದ ಮೃತಪಟ್ಟ ಎಲ್ಲ ಕುಟುಂಬಗಳಿಗೂ ತಲಾ ಒಂದು ಲಕ್ಷ ರೂ. ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಸಿಎಂ ಒಪ್ಪಿಗೆ ನೀಡುವ ವಿಶ್ವಾಸವಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಅವರು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ಪರಿಶೀಲನಾ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ವರ್ಷ ಕೋವಿಡ್‍ನ ಮೊದಲನೆ ಅಲೆಯಲ್ಲಿ 264 ಜನ ಹಾಗೂ ಈ ವರ್ಷದ ಮಾರ್ಚ್ ನಿಂದ ಈವರೆಗಿನ ಎರಡನೆ ಅಲೆಯಲ್ಲಿ 273 ಜನ ಸೇರಿದಂತೆ ಒಟ್ಟು 537 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಕೋವಿಡ್‍ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಕೋವಿಡ್‍ನಿಂದ ಸಂಭವಿಸಿದ ಸಾವಿಗೆ ಪರಿಹಾರ ನೀಡುವ ವಿಷಯದಲ್ಲಿ ಬಿಪಿಎಲ್, ಎಪಿಎಲ್ ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಪರಿಹಾರ ನೀಡುವಂತೆ ಈಗಾಗಲೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 537 ಜನ ಕೋವಿಡ್‍ನಿಂದ ಮೃತಪಟ್ಟಿದ್ದು, ಪ್ರತಿ ವ್ಯಕ್ತಿಗೆ 01 ಲಕ್ಷ ರೂ. ಗಳಂತೆ ಪರಿಹಾರ ನೀಡಿದರೆ, 5.37 ಕೋಟಿ ರೂ. ಅನುದಾನ ಜಿಲ್ಲೆಗೆ ಬೇಕಾಗುತ್ತದೆ. ಆದಷ್ಟು ಶೀಘ್ರ ಮುಖ್ಯಮಂತ್ರಿಗಳು ಈ ಕುರಿತು ನಿರ್ಧಾರ ಕೈಗೊಳ್ಳುವರು ಎಂದರು.

Leave a Reply

Your email address will not be published. Required fields are marked *

error: Content is protected !!