Rainfall : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ.!

ದಾವಣಗೆರೆ: ಕರ್ನಾಟಕ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಚುರುಕಾಗುವ ಸಾಧ್ಯತೆ ಕಂಡುಬಂದಿದ್ದು, ಮಂಗಳವಾರ ರಾಜ್ಯದ ಕೆಲವು ಜಿಲ್ಲಾ ಪ್ರದೇಶದಲ್ಲಿ ಭಾರಿ ಮಳೆ ಆಗುವ ಸಂಭವ ಇದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಅಗುತ್ತಿದ್ದು, ಇನ್ನೂ ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ, ಕರಾವಳಿ ಭಾಗದ ಜಿಲ್ಲೆಯಲ್ಲಿ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಮೈಸೂರು, ಬೆಂಗಳೂರು,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಕೋಲಾರ, ಈ ಭಾಗದ ಜಿಲ್ಲೆಯಲ್ಲಿ ಉತ್ತಮ ಮಳೆ ಆಗಲಿದೆ ಎಂದಿದ್ದಾರೆ. ಅಲ್ಲದೆ ಶಿವಮೊಗ್ಗ, ಕೊಪ್ಪಳ, ಉತ್ತರಕನ್ನಡ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಜಿಲ್ಲೆಯ ಪ್ರದೇಶಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದಿದೆ ಹವಾಮಾನ ಇಲಾಖೆ.
ಬೆಂಗಳೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ : ಬೆಂಗಳೂರು ನಗರ ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಉತ್ತಮ ಮಳೆಯಾಗಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬಂಧಿದೆ, ಸಂಜೆಯವರೆಗೆ ಇದೇ ರೀತಿ ಮುಂದುವರಿಯಲಿದೆ,ಯಲಹಂಕ, ರಾಜರಾಜೇಶ್ವರಿ ನಗರ, ಬಿಬಿಎಂಪಿ, ದಕ್ಷಿಣವಲಯ, ಬೊಮ್ಮನಹಳ್ಳಿ, ಬೆಂಗಳೂರು ಉತ್ತರ ವಲಯ, ಪ್ರದೇಶದಲ್ಲಿ ಭಾರಿ ಮಳೆಯಾಗುವ ಲಕ್ಷಣವಿದೆ ಎನ್ನಲಾಗಿದೆ.
ಮುಂಗಾರು ಕೈಕೊಟ್ಟಿದ್ದಕ್ಕೆ ರೈತ ಕಂಗಾಲು : ಜೂನ್ ತಿಂಗಳ ಪ್ರಥಮ ವಾರದಲ್ಲಿ ಮುಂಗಾರು ರಾಜ್ಯದಲ್ಲಿ ಉತ್ತಮ ಮಳೆಯಾಗಬೇಕಿತ್ತು, ಆದರೆ ತಿಂಗಳಾಂತ್ಯವಾದರೂ ಕೂಡ ಮಳೆರಾಯನ ಕೃಪೆ ರೈತನಿಗೆ ದೊರಕಿಲ್ಲ, ಈಗಾಗಲೇ ರೈತ ತನ್ನ ಹೊಲದ ಬಿತ್ತನೆಗಾಗಿ ಬೀಜ,ಗೊಬ್ಬರಗಳ ಸಿದ್ದತೆ ಮಾಡಿಕೊಂಡು ಮಳೆಯ ಕೃಪೆಗೆ ಆಕಾಶ ನೋಡುತ್ತಿದ್ದಾನೆ,
ಬಿಪರ್ ಜಾಯ್ ಸೈಕ್ಲೋನ್ ಎಫೆಕ್ಟ್ ನಿಂದಾಗಿ ಕರ್ನಾಟಕದಲ್ಲಿ ಮಳೆಯ ಕೊರತೆಯಾಗಿದೆ ಎಂದು ಹವಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ತಮಿಳುನಾಡು ಸೇರಿದಂತೆ ರಾಜ್ಯದಲ್ಲೂ ಕೂಡ ಭಾರಿ ಮಳೆಯಾಗುವ ಲಕ್ಷಣ ಗೋಚರಿಸಿದೆ ಎಂದು ಮಾಹಿತಿ ನೀಡಿದ್ದಾರೆ.