ದಾವಣಗೆರೆ: ಜನಸ್ಪಂದನ ಸಭೆ ಮಾ. 17 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಸಭೆಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.