ಜೆ ಜೆ ಎಂ ಮೆಡಿಕಲ್ ಕಾಲೇಜಿನಲ್ಲಿ ಎಸ್ ಎಸ್ ಅವರ 93 ನೇ ಹುಟ್ಟುಹಬ್ಬ ಸಂಭ್ರಮ

ದಾವಣಗೆರೆ: ಜೆ ಜೆ ಎಂ ಮೆಡಿಕಲ್ ಕಾಲೇಜಿನ ಚೇರ್ಮನ್ ಹಾಗೂ ದಾವಣಗೆರೆ ದಕ್ಷಿಣ ವಿಭಾಗದ ಶಾಸಕರಾದ ಶ್ರೀ ಡಾ. ಶಾಮನೂರು ಶಿವಶಂಕರಪ್ಪ ಅವರ 93ನೇ ವರ್ಷದ ಹುಟ್ಟುಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂತೋಷದಿಂದ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಎಸ್ ಬಿ ಮುರುಗೇಶ್ ಹಾಗೂ ಬಾಪೂಜಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾಕ್ಟರ್ ಕುಮಾರ್ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಕೇಕ್ ಕಟ್ ಮಾಡಿ ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ತಿನ್ನಿಸಿ, ನಂತರ ವೈದ್ಯರುಗಳಿಗೆ ತಿನ್ನಿಸಿದ ಡಾಕ್ಟರ್ ಶಾಮನೂರು ಶಿವಶಂಕರಪ್ಪ ಅವರು ತಮ್ಮ 93ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ರಕ್ತದಾನ ಮಾಡಿದ 93 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ನಿಮ್ಮೆಲ್ಲರ ಜೀವನ ಹಸನಾಗಿರಲಿ ಎಂದು ಹಾರೈಸಿದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಗೋಪಾಲಕೃಷ್ಣ ಅವರಿಗೆ 75 ಬಾರಿ ರಕ್ತದಾನ ಮಾಡಿದ್ದಕ್ಕಾಗಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಾಗೂ ಬಾಪೂಜಿ ಆಸ್ಪತ್ರೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳು, ರಕ್ತದಾನಿಗಳು, ಅಭಿಮಾನಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಕೊನೆಯಲ್ಲಿ ಡಾಕ್ಟರ್ ಶಾಮನೂರು ಶಿವಶಂಕರಪ್ಪನವ ಅವರು 93ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ 93 ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿದರು.