ರಾಜಕೀಯ ಹಿಂದೆ ರಾಹುಲ್ ಗಾಂಧಿ ಅನರ್ಹತೆ ಪಿತೂರಿ: ಡಿಕೆಶಿ ಆಕ್ರೋಶ

ರಾಜಕೀಯ ಹಿಂದೆ ರಾಹುಲ್ ಗಾಂಧಿ ಅನರ್ಹತೆ ಪಿತೂರಿ: ಡಿಕೆಶಿ ಆಕ್ರೋಶ

ಬೆಂಗಳೂರು: ಬಿಜೆಪಿಯ ಕೇಂದ್ರ ಸರ್ಕಾರ ಕುತಂತ್ರ ಮಾಡಿ ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ನಡೆದ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿ ಸರ್ಕಾರ ಕಳೆದ 9 ವರ್ಷಗಳಿಂದ ನೆಹರೂ ಕುಟುಂಬದ ಮೇಲೆ ನಿರಂತರವಾಗಿ ಅಪಪ್ರಚಾರ ಮಾಡುತ್ತಿದೆ. ಆರೆಸ್ಸೆಸ್ ಹಾಗೂ ಬಿಜೆಪಿ ನಿರಂತರವಾಗಿ ಈ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಲೇ ಬಂದಿದೆ.ಎಂದು  ಬಿಜೆಪಿ ಮುಖಂಡರು ಮಾಡಿದ ಅನೇಕ ಭಾಷಣ ಟೀಕೆಗಳಿಗೆ ಇಂದಿಗೂ ಶಿಕ್ಷೆ ಆಗಿಲ್ಲ. ಆದರೆ ರಾಹುಲ್ ಗಾಂಧಿ ಅವರು ಕೋಲಾರದಲ್ಲಿ ಮಾಡಿದ ಭಾಷಣ ಮುಂದಿಟ್ಟುಕೊಂಡು ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ ಎಂದರು.

2024ರ ಚುನಾವಣೆಯಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಕಷ್ಟವಾಗಲಿದೆ ಎಂದು ನಮ್ಮ ನಾಯಕರ ರಾಜಕೀಯ ಜೀವನ ಮುಗಿಸಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ದೂರಿದರು.

ಭಾರತ ಜೋಡೋ ಯಾತ್ರೆ ಬಳಿಕ ರಾಹುಲ್ ಗಾಂಧಿ ಅವರಿಗೆ ದೇಶದ ಜನರಿಂದ ವ್ಯಾಪಕ ವಿಶ್ವಾಸ ದೊರೆತಿದ್ದು, ಇದನ್ನು ಸಹಿಸಲಾಗದೆ ಈ ಕುತಂತ್ರ ಮಾಡುತ್ತಿದ್ದಾರೆ ಎಂದ ಡಿಕೆಶಿ, ಇತ್ತೀಚಿನ ದಿನಗಳಲ್ಲಿ ಜನ ನೀಡಿದ ತೀರ್ಪು ಇದಕ್ಕೆ ಸಾಕ್ಷಿ ಎಂದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಜನ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಮಾಡಿದ ಯಾತ್ರೆ ಪೈಕಿ ಅವರು ಎಲ್ಲೆಲ್ಲಿ ನಡೆದಿದ್ದಾರೆ ಅಲ್ಲೆಲ್ಲ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಶಾಸಕರು ಗೆದ್ದಿದ್ದಾರೆ. ಇದನ್ನು ಬಿಜೆಪಿ ಸರ್ಕಾರದಿಂದ ಸಹಿಸಲು ಆಗುತ್ತಿಲ್ಲ ಎಂದರು.

ರಾಹುಲ್ ಗಾಂಧಿ ಅವರಿಗೆ ಶಕ್ತಿ ತುಂಬಿ, ಅವರ ಜತೆ ದನಿಗೂಡಿಸಿ ನಾವು ಈ ಹೋರಾಟ ಮಾಡುತ್ತಿದ್ದೇವೆ. ರಾಹುಲ್ ಗಾಂಧಿ ದೇಶದ ಬಡವರ ಧ್ವನಿ. ಯುವಕರು, ಶ್ರಮಿಕರು, ಶೋಷಿತರ ವಿರುದ್ದ. ಏನೇ ತೊಂದರೆ ಆದರೂ ನನ್ನ ಹೋರಾಟ ಅಂತ್ಯಗೊಳ್ಳುವುದಿಲ್ಲ. ಈ ಹೋರಾಟದಲ್ಲಿ ಎಂತಹುದೇ ಬೆಲೆ ತೆರಲು ಸಿದ್ಧ ಎಂದು ರಾಹುಲ್ ಗಾಂಧಿ ಅವರು ತಿಳಿಸಿದ್ದಾರೆ. ಅವರ ವಿರುದ್ಧ ಅನಗತ್ಯವಾಗಿ ಮಾನನಷ್ಟ ಮೊಕದ್ದಮೆ ಹಾಕಿ ಶಿಕ್ಷೆ ಪ್ರಕಟ ಆದ 24 ಗಂಟೆಗಳಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ ಎಂದು ಆರೋಪಿಸಿದರು.

ಅವರ ಪರವಾಗಿ ಇಡೀ ರಾಜ್ಯದ ಜನತೆ ನಿಲ್ಲಲಿದೆ ಎಂದ ಡಿಕೆಶಿ, ನಿಮ್ಮ ಹೋರಾಟ ಮುಂದುವರಿಯಬೇಕು. ನಿಮ್ಮ ಧ್ವನಿ ಹಾಗೂ ಶಕ್ತಿ ಈ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿ ಕಾಪಾಡಲು ಮುಂದಾಗಿರುವ ರಾಹುಲ್ ಗಾಂಧಿ ಅವರ ಪರವಾಗಿ ಇರಬೇಕು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ದೇಶದ ಇತಿಹಾಸ. ಗಾಂಧಿ ಕುಟುಂಬ ಮಾತ್ರ ಕಾಂಗ್ರೆಸ್ ಪಕ್ಷವನ್ನು ಒಗ್ಗಟ್ಟಗಿಡಲು ಸಾಧ್ಯ. 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆನೀಡಿದರು.‌

 

Leave a Reply

Your email address will not be published. Required fields are marked *

error: Content is protected !!