ರಾಜ್ಯ ಸುದ್ದಿ

ವರ್ಗಾವಣೆ ಅವಧಿಯನ್ನ ಜೂನ್ 30 ರವರೆಗೆ ವಿಸ್ತರಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಈ ಮುಂಚೆ 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್ 15ರ ವರೆಗೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ಜೂನ್ ಅಂತ್ಯದವರೆಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

ವರ್ಗಾವಣೆ ಅವಧಿಯನ್ನು ವಿಸ್ತರಿಸುವ ಅವಶ್ಯಕತೆಯನ್ನು ಮನಗಂಡು ಸರ್ಕಾರವು ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ಜೂನ್ 30ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

ವರ್ಗಾವಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಈ ಹಿಂದೆ ಹೊರಡಿಸಿದ್ದ ಆದೇಶದಲ್ಲಿ ಹೇಳಲಾಗಿದ್ದು, ಅದರಂತೆ ನೌಕರರ ವರ್ಗಾವಣೆ ಮಾಡಬಹುದಾಗಿದೆ.

Click to comment

Leave a Reply

Your email address will not be published. Required fields are marked *

Most Popular

To Top