ವಿಕಲಚೇತನರಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ

ದಾವಣಗೆರೆ; ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಗಳೂರು ತಾಲ್ಲೂಕಿನ ಗುತ್ತಿದುರ್ಗ, ಮುಸ್ಟೂರು, ಚನ್ನಗಿರಿ ತಾಲ್ಲೂಕಿನ ನಲ್ಲೂರು, ಹೆಬ್ಬಳಗೆರೆ, ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ, ಬನ್ನಿಕೋಡು ಗ್ರಾಮ ಪಂಚಾಯಿತಿಗಳಲ್ಲಿ ಪುನರ್ವಸತಿ ಕಾರ್ಯಕರ್ತರ ಕೆಲಸ ಖಾಲಿ ಇದ್ದು ಮಾಸಿಕ ರೂ.9,000ಗಳ ಗೌರವಧನ ನೀಡಲಾಗುವುದು. ಆಸಕ್ತರು 18 ರಿಂದ 45 ವರ್ಷದ ವಯೋಮಾನದವರಾಗಿದ್ದು, ಆಯಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಜೂನ್.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್ ದಾವಣಗೆರೆ ದೂ.08192-263936 ಮತ್ತು 08192-263939ಗೆ ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ರಕ್ತದಾನಿಗಳ ದಿನಾಚರಣೆ ಜೂನ್ 14 ಕ್ಕೆ
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಕ್ತಭಂಡಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲೆಯ ವಿವಿಧ ರಕ್ತದಾನ ಕೇಂದ್ರಗಳು, ಜಿಲ್ಲಾ ಆರ್.ಆರ್.ಸಿ. ಕಾಲೇಜುಗಳು, ಹಾಗೂ ವಿವಿಧ ಸ್ವಯಂ ಸೇವಾ ಸಂಘ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಿ.ಜಿ ಆಸ್ಪತ್ರೆ ಮುಂಭಾಗ ಜೂನ್ 14 ರಂದು ಬೆಳಗ್ಗೆ 10.30 ಕ್ಕೆ “ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಬೆಳಗ್ಗೆ 09 ಗಂಟೆಗೆ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡುವರು ಹಾಗೂ 10.30 ಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ ಬಿ.ಇಟ್ನಾಳ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಸುಭಾμï ಚಂದ್ರ ಎಸ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಅಧೀಕ್ಷಕ ಡಾ. ಮಧು ಎಸ್.ಪಿ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಮಂಜುನಾಥ ಪಾಟೀಲ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಕೆ ಹೆಚ್. ಗಂಗಾಧರ, ಸಿ.ಜೆ.ಆಸ್ಪತ್ರೆ ಎ.ಆರ್.ಟಿ. ಪ್ಲಸ್ ನೋಡಲ್ ಅಧಿಕಾರಿ ಡಾ. ಕೆ.ಶಿವರಾಜ್, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ರಕ್ತ ಭಂಡಾರದ ವೈದ್ಯಾಧಿಕಾರಿ ಡಾ. ಡಿ.ಹೆಚ್. ಗೀತಾ ಹಾಗೂ ಎಲ್ಲಾ ಕಾರ್ಯಕ್ರಮ ಅನುμÁ್ಠನಾಧಿಕಾರಿಗಳು, ಜಿಲ್ಲಾ ಆ.ಕು.ಕ, ಇಲಾಖೆ ಮತ್ತು ತಾಲ್ಲೂಕು ವೈದ್ಯಾಧಿಕಾರಿಗಳು ಭಾಗವಹಿಸುವರು.
ವಿದ್ಯುತ್ ವ್ಯತ್ಯಯ
ದಾವಣಗೆರೆ; ನಗರದ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆ.ವಿ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜಲಸಿರಿ (24*7) ಶುದ್ದಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 14 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್16-ಎಸ್.ಜೆ.ಎಮ್ ಫೀಡರ್ ವ್ಯಾಪ್ತಿಯ ಕೊಂಡಜ್ಜಿ ರಸ್ತೆ, ಎಸ್.ಜೆ.ಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್.ಎಮ್.ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಉದ್ಯೋಗ ಮೇಳ ಜೂನ್ 16 ಕ್ಕೆ
ದಾವಣಗೆರೆ: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಧ.ರಾ.ಮ ವಿಜ್ಞಾನ ಕಾಲೇಜು ವತಿಯಿಂದ ಜೂನ್ 16 ರಂದು ಬೆಳಗ್ಗೆ 10 ಗಂಟೆಗೆ ನಗರದ ಧ.ರಾ.ಮ ವಿಜ್ಞಾನ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಹಲವು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಎ, ಬಿ.ಕಾಂ,ಬಿ.ಎಸ್ಸಿ, ಬಿ.ಬಿ.ಎ, ಬಿ.ಬಿ.ಎಂ, ಬಿ.ಸಿ.ಎ, ಎಂ.ಎ, ಎಂಎಸ್ಸಿ ಎಂಕಾಂ, ಎಂಬಿಎ, ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತರು ನಿಗಧಿತ ಸ್ಥಳಕ್ಕೆ ಸಂದರ್ಶನ ಸಮಯಕ್ಕೆ ಕನಿಷ್ಠ 8 ಸೆಟ್ ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗೆ 08192259446, 7760818607, 9945579519, ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ರವೀಂದ್ರ. ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.