ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಪದವಿ, ಸ್ನಾತಕೋತ್ತರ, ವಿಜ್ಞಾನ, ವಿದ್ಯಾರ್ಥಿ, ರಸಪ್ರಶ್ನೆ, ಸ್ಪರ್ಧೆ,

ದಾವಣಗೆರೆ:  ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75 ನೇ ವಾರ್ಷಿಕೋತ್ಸದ ಅಂಗವಾಗಿ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಅರ್ಬನ್ ಮ್ಯಾನೇಜ್‍ಮೆಂಟ್ ಅಂಡ್ ವಾಟರ್ ಕನ್‍ವರ್‍ಜೇಷನ್ ವಿಷಯದ ಬಗ್ಗೆ ರಾಜ್ಯಮಟ್ಟದ ರಸ ಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಗಳು ಜೂನ್ 23 ರೊಳಗಾಗಿ ನೋಂದಣಿ ಮಾಡಿಕೊಳ್ಳಬಹುದು. ಸ್ಪರ್ಧೆಯು ಜೂನ್ 27 ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಜಿ.ಕೆ.ವಿಕೆ ಆವರಣ, ಮೇಜರ್ ಸಂದೀಪ್ ಉನ್ನೀಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್ ಬೆಂಗಳೂರು-560097, ದೂ.ಸಂ: 080-29721550 ಇಲ್ಲಿ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ ಸೈಟ್ www.kstacademy.in      ವೀಕ್ಷಿಸಬಹುದೆಂದು ಎ.ಎಂ ರಮೇಶ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!