Jagadish Shettar : ವಿಧಾನ ಪರಿಷತ್ ಪೈಪೊಟಿ : ಜಗದೀಶ್ ಶೆಟ್ಟರ್ ಗೂ ಟಿಕೆಟ್ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನ ಪರಿಷತ್ ಪೈಪೊಟಿ : ಜಗದೀಶ್ ಶೆಟ್ಟರ್ ಗೂ ಟಿಕೆಟ್ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ದೆಹಲಿ : ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.‌ ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಿರುವ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ , ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ರವರ ಹೆಸರುಗಳಿವೆ.

ಜೂನ್‌ 30ರಂದು ನಡೆಯಲಿರುವ ಈ ಚುನಾವಣೆಯಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯುವುದು ಅನಿಶ್ಚಿತ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳೇ ಹೆಚ್ಚು.

ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಶಾಸಕರಾದ ಆರ್. ಶಂಕರ್, ಲಕ್ಷ್ಮಣ್ ಸವದಿ, ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿರುವ ಸ್ಥಾನಗಳಿಗೆ ಈ ಚುನಾವಣೆ ಏರ್ಪಟ್ಟಿದೆ.

 

 

Leave a Reply

Your email address will not be published. Required fields are marked *

error: Content is protected !!