ಉದ್ಯಮಾಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲತಾ ಕಾರ್ಯಕ್ರಮ

IMG-20210825-WA0005

ದಾವಣಗೆರೆ: ಸಿಡಾಕ್- ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ ಸಂಸ್ಥೆಯ ಮೂಲಕ ಜಿಲ್ಲೆಯ ಉದ್ಯಮಾಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಸೆಪ್ಟಂಬರ್ ತಿಂಗಳಿನ ಎರಡನೇ ವಾರದಲ್ಲಿ ಯೋಜಿಸಲು ಉದ್ದೇಶಿಸಿದ್ದು, ಆಸಕ್ತ ಶಿಬಿರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಆಸಕ್ತರು 20 ರಿಂದ 40 ವರ್ಷ ವಯೋಮಿತಿಯ 10 ನೇ ತರಗತಿ ಪಾಸಾದ ಉದ್ಯಮಾಕಾಂಕ್ಷಿಗಳು ಅರ್ಜಿ ಸಲ್ಲಿಸಲು ಸೆ.09 ಕೊನೆಯ ದಿನಾಂಕವಾಗಿರುತ್ತದೆ.
ಕಾರ್ಯಕ್ರಮದಲ್ಲಿ ಉದ್ಯಮಶೀಲರ ಗುಣಲಕ್ಷಣಗಳು, ಸಾಮಾನ್ಯ ವ್ಯಕ್ತಿಯಿಂದ ಉದ್ಯಮಶೀಲ ವ್ಯಕ್ತಿಯಾಗಿ ಪರಿರ್ವತನೆಯಾಗಲು ಸಾಧನಾ ಪ್ರೇರಣ ತರಬೇತಿ, ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಮಜಲುಗಳು, ಉದ್ಯಮಾವಕಾಶಗಳ ಮಾಹಿತಿ, ಉದ್ಯಮ ಆಯ್ಕೆಯ ವಿಧಾನ, ಯೋಜನಾ ವರದಿ ತಯಾರಿ, ಹಣಕಾಸು ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ, ಸಣ್ಣ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳನ್ನು ಪರಿಣಿತ ಅತಿಥಿ ಬೋಧಕರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು. ಶಿಬಿರಾರ್ಥಿಗಳು ಉದ್ಯಮ ಪ್ರಾರಂಭಿಸಲು ಬೆಂಬಲ ಸೇವೆ ಒದಗಿಸಲಾಗುವುದು.

ಕಾರ್ಯಕ್ರಮವು ಉಚಿತವಾಗಿದ್ದು, ತರಬೇತಿ ವೇಳೆಯಲ್ಲಿ ಊಟೋಪಚಾರ ಒದಗಿಸಲಾಗುವುದು. ಆಯ್ಕೆಯಾದ ಶಿಬಿರಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಪ್ರಯಾಣ ಮಾಡಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್ ರವರ ಕಚೇರಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕರೂರು ಕೈಗಾರಿಕಾ ವಲಯ, ಹಾಗೂ ಸಿಡಾಕ್ ತರಬೇತುದಾರರಾದ ಬಸವರಾಜ ಕೆ.ಬಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಮೊ.ಸಂ. 9164742033 ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!