ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಲಾದೆ. ನಿರ್ಮಿತಿ ಕೇಂದ್ರದಲ್ಲಿ ಯೋಜನಾ ಹುದ್ದೆ ಖಾಲಿ ಇದ್ದು 2 ವರ್ಷದ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಚಿತ್ರದುರ್ಗ ನಿರ್ಮಿತಿ ಕೇಂದ್ರದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿ ಸಿವಿಲ್‌ ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ಟ್ರಕ್ಚರಲ್ ಎಂಜಿನಿಯರಿಂಗ್‌ನಲ್ಲಿ ಎಂಟೆಕ್ ಅನ್ನು ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಈ ಹುದ್ದೆಗಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆ ಭರ್ತಿ ಮಾಡಿ, ಇ-ಮೇಲ್ ಐಡಿ dc.chitradurga@ka.gov.in ಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಕಳುಹಿಸಬೇಕು. ಅರ್ಜಿ ಸಲ್ಲಿಸಲು 18-07-2023 ಕೊನೆಯ ದಿನಾಂಕವಾಗಿದೆ. ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್: chitradurganirmithikendra.com ಕ್ಲಿಕ್ ಮಾಡಿ ಪಡೆಯಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!