ರಾಷ್ಟ್ರಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ

ದಾವಣಗೆರೆ: ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ದಿ.ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಸ್ಮರಣಾರ್ಥ ನ.25ರಿಂದ 28ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಷ್ಟ್ರಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಬ್ಯಾಟಿಂಗ್ ಮಾಡುವ ಮೂಲಕ ಬುಧವಾರ ಸಂಜೆ ಚಾಲನೆ ನೀಡಿದರು.
ಉದ್ಯಮಿ ಅಥಣಿ ವೀರಣ್ಣ, ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಉಪಾಧ್ಯಕ್ಷ ಶ್ರೀನಿವಾಸ ಶಿವಗಂಗಾ, ಪ್ರಧಾನ ಕಾರ್ಯದರ್ಶಿ ಕುರುಡಿ ಗಿರೀಶ್ (ಸ್ವಾಮಿ), ಸಹ ಕಾರ್ಯದರ್ಶಿ ಜಯಪ್ರಕಾಶ್ ಗೌಡ, ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್, ಲಕ್ಷ್ಮೀ ವೆಂಕಟೇಶ್ವರ ಗ್ರಾನೈಟ್‌ನ ಮಾಲೀಕ ಮಹಾದೇವ್, ರಮೇಶ್, ರಾಜು ರೆಡ್ಡಿ, ದುಗ್ಗಪ್ಪ ಮತ್ತಿರರಿದ್ದರು. ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು 32 ತಂಡಗಳು ಭಾಗವಹಿಸಲಿವೆ.