ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹಸ್ತಕ್ಷೇಪ, ಸಚಿವ ಈಶ್ವರಪ್ಪರಿಂದ ರಾಜ್ಯಪಾಲರು ಹಾಗೂ ಬಿಜೆಪಿಯ ಅರುಣ್ ಸಿಂಗ್ ಗೆ ಸಿಎಂ ವಿರುದ್ದ ದೂರು. ದೂರಿನಲ್ಲಿರುವ ಮಾಹಿತಿ ಏನು ಗೊತ್ತಾ ಈ ಸುದ್ದಿ ನೋಡಿ…

ವರದಿ: ಹೆಚ್ ಎಂ ಪಿ ಕುಮಾರ್
ಬೆಂಗಳೂರು:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ ಅವರು, ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರು ಹಾಗೂ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ದೆಹಲಿಯ ವರಿಷ್ಠರಿಗೆ ದೂರು ನೀಡಿದ್ದಾರೆ.
ಕಳೆದ ಒಂದುವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವನಾಗಿ ಕೆಲಸ ಮಾಡುತ್ತಿರುವ ತಮ್ಮ ಗಮನಕ್ಕೆ ಬಾರದಂತೆ ಸಿಎಂ ಯಡಿಯೂರಪ್ಪ ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದರಿಂದ ನೋವಾಗಿದೆ ಎಂದಿದ್ದಾರೆ. ಒಬ್ಬ ಸಂಪುಟ ದರ್ಜೆಯ ಸಚಿವರು ತಮ್ಮ ನಾಯಕನ ವಿರುದ್ಧ ಲಿಖಿತವಾಗಿ ರಾಜ್ಯಪಾಲರು ಮತ್ತು ಕೇಂದ್ರ ನಾಯಕರಿಗೆ ದೂರು ನೀಡಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು! ರಾಜ್ಯ ಬಿಜೆಪಿ ಸರ್ಕಾರದಲ್ಲಿ ಇರುವ ಗುಂಪು ಗಾರಿಕೆಗೆ ಇದು ನೇರ ಸಾಕ್ಷಿಯಾಗಿದೆ.
ಬಿಜೆಪಿ ನಾಯಕರು ಇದು ಕಾಂಗ್ರೆಸ್ ಕೈವಾಡ ಎಂದು ಹೇಳದ್ದಿದ್ದರೆ ಅದು ಜನರ ಪುಣ್ಯ!!
ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿ ರೂ.ಗೆ ಸಂಬಂಧಿಸಿದಂತೆ ಕಾನೂನು ಮೀರಿ ಸುಖಾಸುಮ್ಮನೆ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಆರ್ಡಿಪಿಆರ್ ಇಲಾಖೆಯ ಅನುದಾನವನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಂಚಿದ್ದಾರೆ ಎಂದು ರಾಜ್ಯಪಾಲ ವಜುಭಾಯಿವಾಲಾ ಅವರನ್ನು ಭೇಟಿ ಮಾಡಿ ಈಶ್ವರಪ್ಪ ಅವರು ಲಿಖಿತ ದೂರು ನೀಡಿದ್ದಾರೆ.
ಇದರಿಂದ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದೆ.
ಇದು ಮುಖ್ಯಮಂತ್ರಿಗಳ ವಿರುದ್ಧವೇ ಅವರ ಸಂಪುಟದ ಹಿರಿಯ ಸಚಿವರು ರಾಜ್ಯಪಾಲರು ಹಾಗೂ ಅವರ ಪಕ್ಷದ ವರಿಷ್ಟರಿಗೆ ದೂರು ನೀಡಿರುವುದು ಮುಖ್ಯಮಂತ್ರಿಗಳು ತಮ್ಮ ಸಹದ್ಯೋಗಿಗಳ ವಿಶ್ವಾಸ ಕಳೆದುಕೊಂಡಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಬಿಜೆಪಿಯ ಹಿರಿಯ ನಾಯಕರು ರಾಜ್ಯ ಬಿಜೆಪಿಯಲ್ಲಿನ ಗುಂಪು ಗಾರಿಕೆಗೆ ಚಿಕೆತ್ಸೆ ನೀಡಬೇಕಾಗಿರುವುದಂತು ಸತ್ಯ..