ಇಂದಿನಿಂದ 1 ರಿಂದ 5 ನೇ ತರಗತಿ ಮಕ್ಕಳಿಗೆ ಶಾಲೆ ಪ್ರಾರಂಭ: ಚಿಣ್ಣರಿಗೆ ಸಿಹಿ ಹಂಚಿ ಸ್ವಾಗತ

ದಾವಣಗೆರೆ: ಕಳೆದ 18 ರಿಂದ 20 ತಿಂಗಳಿನಿಂದ ಕೋವಿಡ್ ಮಹಾಮಾರಿಗೆ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳ ಮಕ್ಕಳು ಶಾಲೆಗಳಿಂದ ದೂರ ಉಳಿದಿದ್ದ ಮಕ್ಕಳು ಶಾಲೆಗಳ ಅಂಗಳಕ್ಕೆ ಹೆಜ್ಜೆ ಹಾಕಿದರು.
ಚಿಣ್ಣರ ಸ್ವಾಗತಕ್ಕೆ ಶಾಲೆಗಳು ಕೂಡ ಕಳೆದ ವಾರದಿಂದ ಸಜ್ಜಾಗಿದ್ದವು ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು ತಳಿರು-ತೋರಣಗಳಿಂದ ಮದುವಣಗಿತ್ತಿಯಂತೆ ಶೃಂಗಾರ ಗೊಂಡಿದ್ದವು
1ರಿಂದ 5ನೇ ತರಗತಿಯವರೆಗೆ ಶಾಲಾ ಮಕ್ಕಳಿಗಾಗಿ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದ ಹಿನ್ನೆಲೆಯಲ್ಲಿ ಶಾಲೆಗಳ ಕೊಠಡಿ ಅದು ಸುತ್ತಮುತ್ತಲ ವಾತಾವರಣವನ್ನು ಶುಚಿಗೊಳಿಸಿ ಸ್ಯಾನಿಟಾಜ್ ಮಾಡಲಾಗಿತ್ತು
ಇಂದಿನಿಂದ ಪ್ರಾರಂಭವಾಗುವ ಶಾಲೆಯು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ತರಗತಿಗಳು ನಡೆಸಲಾಗುವುದು ಎಂದು ಇಲಾಖೆಯು ತಿಳಿಸಿದೆ.
ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲೆಗೆ ಬರಬೇಕು ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವೇನಲ್ಲ ಎಂದು ಇಲಾಖೆ ತಿಳಿಸಿದೆ.
ನಿಟುವಳ್ಳಿಯ ಲಿರುವ ಸರ್ಕಾರಿ ಪ್ರೌಢಶಾಲೆ ಹಾಗೂ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಯ ಚಿಣ್ಣರುಗಳಿಗೆ ಗುಲಾಬಿ ಹೂವು ಹಾಗೂ ಸಿಹಿ ಹಂಚಿ ಸ್ವಾಗತಿಸಲಾಯಿತು
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ಹಾಗೂ ಶಿಕ್ಷಣ ಇಲಾಖೆಯ ಪ್ರಮುಖರು ಇದ್ದರು.