10ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಕ್ಷಾ ಸಮಯದಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಪರೀಕ್ಷೆ ಬರೆಯಲು ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ.

ಮಾರ್ಚ್ 31ರಿಂದ ಏಪ್ರಿಲ್ 15 ರವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ನಡೆಯುವ ದಿನಾಂಕದಂದು ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಸಂಚರಿಸಲು ಸೂಚಿಸಲಾಗಿದೆ.. ಬಸ್ ಡ್ರೈವರ್ ಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳ ಮುಂದೆ ಸ್ಟಾಪ್ ಕೊಡುವಂತೆ ನಿಗಮ ಸೂಚಿಸಿದೆ. ಪರೀಕ್ಷಾ ಕೇಂದ್ರಗಳ ಮುಂದೆ ವಿದ್ಯಾರ್ಥಿಗಳ ಕೋರಿಗೆ ಮೇರೆಗೆ ಇಳಿಯಲು ಮತ್ತು ಹತ್ತಲು ಕೋರಿಕೆ ನಿಲುಗಡೆ ನೀಡಲು ಸೂಚನೆ ನೀಡಿದೆ.

ಸಹಾಯವಾಣೆ: ಇದೇ ಮಾ.31ರಿಂದ ಏಪ್ರಿಲ್‌ 15ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮೂಡುವ ಯಾವುದೇ ಸಂದೇಹ, ಆತಂಕ, ಗೊಂದಲಗಳನ್ನು ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿ 080- 23310075 , 080- 23310076 ಆರಂಭಿಸಿದೆ.

ಈ ಸಹಾಯವಾಣಿಯು ಮಾ. 28ರವರೆಗೆ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ 3ರಿಂದ ಸಂಜೆ 7.30ರವರೆಗೆ ಮತ್ತು ಮಾ.26ರಂದು ಬೆಳಗ್ಗೆ 11ರಿಂದ ಸಂಜೆ 6ರವರೆಗೆ ಕಾರ್ಯನಿರ್ವಹಿಸಲಿದೆ. ಪರೀಕ್ಷೆ ನಡೆಯುವ ಮಾ.31ರಿಂದ ಏ.15ರ ವರೆಗಿನ ದಿನಗಳಲ್ಲಿ ಈ ಸಹಾಯವಾಣಿ ಕೇಂದ್ರ ನಿಯಂತ್ರಣ ಕೊಠಡಿಯಾಗಿ ಮಾರ್ಪಾಡು ಮಾಡಲಾಗುತ್ತದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!