ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ, 100 ಕಿ.ಮೀ. ಸ್ಪೀಡ್ ದಾಟಿದರೆ ದಂಡ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆ ವೇಗಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ.
ಈ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. 120 ಕಿ.ಮೀ. ವೇಗದಲ್ಲಿ ವಾಹನ ಸಂಚಾರದಿಂದ ಅಪಘಾತ ಹೆಚ್ಚಳವಾಗಿದೆ. ಹೀಗಾಗಿ ಅಪಘಾತ ತಡೆಯಲು ಗಂಟೆಗೆ 100 ಕಿ.ಮೀ. ವೇಗದ ಮಿತಿ ನಿಗದಿ ಮಾಡಲಾಗಿದೆ.
ಅದರಂತೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸ್ಪೀಡ್ ರಡಾರ್ ಗನ್, ವಾಹನಗಳ ನಂಬರ್ ಪ್ಲೇಟ್ ರೆಕಗ್ನಿಷನ್ (ANPR) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಎಕ್ಸ್ಪ್ರೆಸ್ವೇನಲ್ಲಿ ನಿಗದಿತ ವೇಗದಲ್ಲಿ ವಾಹನಗಳು ಸಂಚರಿಸಬೇಕು. 100 ಕಿ.ಮೀ. ವೇಗದ ಮಿತಿ ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲು ಮಾಡಲಾಗುತ್ತದೆ ಎಂದು ರಸ್ತೆ ಸುರಕ್ಷಿತ ಮತ್ತು ಸಂಚಾರ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನು ಮುಂದೆ ವಾರಾಂತ್ಯದ ದಿನಗಳಲ್ಲಿ ಟೋಲ್‌ಗೇಟ್ ಬಳಿ ‘ಡ್ರಿಂಕ್ ಆ್ಯಂಡ್ ಡ್ರೈವ್’ ಟೆಸ್ಟ್ ಮಾಡುವುದಾಗಿ ಎಡಿಜಿಪಿ ಅಲೋಕ್‌ಕುಮಾರ್ ತಿಳಿಸಿದ್ದಾರೆ.