ಇಂದು 10158 ಕೋವಿಡ್ ಕೇಸ್
ನವದೆಹಲಿ: ದೇಶದಾದ್ಯಂತ ಗುರುವಾರ ಹೊಸದಾಗಿ 10,158 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 19 ಮಂದಿ ಮೃತಪಟ್ಟಿದ್ದಾರೆ.
ಸರಿ ಸುಮಾರು ಎಂಟು ತಿಂಗಳಲ್ಲೇ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ. ಬುಧವಾರದಂದು 7,830 ಪ್ರಕರಣ ದೃಢಪಟ್ಟಿತ್ತು. ಸಕ್ರಿಯ ಪ್ರಕರಣಗಳ ಸಂಖ್ಯೆ 44,998ಕ್ಕೆ ಏರಿಕೆಯಾಗಿದೆ.
ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 4.42 ಮತ್ತು ವಾರದ ಪಾಸಿಟಿವಿಟಿ ದರ 4.02 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಈವರೆಗೆ ಒಟ್ಟು 4,42,10,127 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಪೈಕಿ ಶೇ 0.10 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.71 ಆಗಿದೆ.