ಮೃತ ಶಿಕ್ಷಕ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಣೆ
ದಾವಣಗೆರೆ: ಚನ್ನಗಿರಿ ಕ್ಷೇತ್ರದಲ್ಲಿ ಚುನಾವಣಾ ಸಿಬ್ಬಂದಿಗೆ ತರಬೇತಿ ನೀಡುವ ವೇಳೆ ಪ್ರೌಢಶಾಲೆ ಸಹಶಿಕ್ಷಕ ಶ್ರೀನಿವಾಸ್ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮರಣಹೊಂದಿದ್ದು ರಾತ್ರಿಯೇ ಅವರ ಪತ್ನಿಗೆ ಚುನಾವಣಾ ಆಯೋಗದ ನಿರ್ದೇಶನದಂತೆ ರೂ.15 ಲಕ್ಷದ ಚೆಕ್ ನೀಡಲಾಗಿದೆ. ಕರ್ತವ್ಯದ ವೇಳೆ ಮತ್ತು ಚಿಕ್ಕ ವಯಸ್ಸಿನಲ್ಲಿ ಮೃತಪಟ್ಟಿರುವುದು ದುಃಖದ ಸಂಗತಿಯಾಗಿದೆ ಎಂದ ಅವರು ಚುನಾವಣಾ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿಗಳ ಆರೋಗ್ಯ ರಕ್ಷಣೆ ಮತ್ತು ಉಸ್ತುವಾರಿ ನಮ್ಮ ಕೆಲಸವಾಗಿರುತ್ತದೆ ಎಂದರು.