ಕಳೆದಿದ್ದ 18 ಮೊಬೈಲ್‌ಗಳು CEIR ವೆಬ್ ಪೋರ್ಟಲ್ ಮೂಲಕ ಪತ್ತೆ

ದಾವಣಗೆರೆ: ನಗರಗದಲ್ಲಿ ಕಳೆದಿದ್ದ ಸುಮಾರು 18 ಬೊಬೈಲ್‌ಗಳನ್ನು ಪೊಲೀಸರು ಪತ್ತೆ ಹಚ್ಚಿ, ವಾರಸುದಾರರಿಗೆ ಮರಳಿಸಿದ್ದಾರೆ.
ಸೋಮವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ಅವರು ತಮ್ಮ ಕಚೇರಿಯಲ್ಲಿ ವಾರಸುದಾರರಿಗೆ ಮೊಬೈಲ್‌ಗಳನ್ನು ಮರಳಿಸಿದರು.
ಮೊಬೈಲ್ ಕಳೆದುಕೊಂಡವರು ನೂತನ CEIR ಪೋರ್ಟಲ್ (ಕಳುವಾದ, ಸುಲಿಗೆಯಾದ, ಕಾಣೆಯಾದ ಮೊಬೈಲ್ ಗಳ ಬ್ಲಾಕ್ ಮಾಡಲು ಕೇಂದ್ರ ಟೆಲಿ ಕಮ್ಯುನಿಕೇಶನ್ ಇಲಾಖೆಯಿಂದ ಜಾರಿಗೆ ತಂದಿರುವ ನೂತನ ವ್ಯವಸ್ಥೆ ) ಗೆ ಭೇಟಿ ನೀಡಿ ತಮ್ಮ ಮೊಬೈಲ್ ನ ಸಂಪೂರ್ಣ ಮಾಹಿತಿ ನೀಡಿ ನೊಂದಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಕಳೆದ ಮೊಬೈಲ್‌ಗಳನ್ನು CEIR ವೆಬ್ ಪೋರ್ಟಲ್ ಮೂಲಕ ಪೊಲೀಸರು ಪತ್ತೆ ಮಾಡಿ ಮರಳಿಸಿದ್ದಾರೆ.
ಈ ಸಂಧರ್ಭದಲ್ಲಿ ಸಿ.ಇ.ಎನ್ ಪೊಲೀಸ್ ಠಾಣೆಯ ಪಿಐ ಮಂಜುನಾಥ್, ಜಿಲ್ಲಾ ಪೊಲೀಸ್ ಕಛೇರಿ ಸಿಬ್ಬಂದಿ ರಾಘವೇಂದ್ರ, ಶಾಂತಕುಮಾರ್ ಉಪಸ್ಥಿತರಿದ್ದರು.
ಸಾರ್ವಜನಿಕರು ತಮ್ಮ ಮೊಬೈಲ್ ಕಳವು, ಸುಲಿಗೆ ಅಥವಾ ಕಳೆದ ಹೋದರೆ ಕೂಡಲೇ ನೂತನ CEIR ವೆಬ್ ಪೋರ್ಟಲ್ ಗೆ ಭೇಟಿ ನೀಡಿ ನೋಂದಾಯಿಸಿ ಹಾಗೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪೊಲೀಸ್ ಇಲಾಖೆ ತಿಳಿಸಿದೆ.