ಅಧಿಕಾರಕ್ಕೆ ಬಂದರೆ ನೀರಾವರಿಗೆ 2 ಲಕ್ಷ ಕೋಟಿ: ಡಿಕೆಶಿ

Gujarat model for BJP, 'Karnataka model' for Congress; DK

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ನಿರಾವರಿ ಯೋಜನೆಗಳಿಗಾಗಿ 2 ಲಕ್ಷ ಕೋಟಿ ರೂ. ಅನುದಾನ ಮೀಸಲಿಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಶನಿವಾರ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.ಈಗಾಗಲೇ 200 ಯುನಿಟ್‌ ಉಚಿತ ವಿದ್ಯುತ್‌, ಮಹಿಳೆಯರಿಗೆ ಮಾಸಿಕ 2 ಸಾವಿರ ರೂ., ಪ್ರತಿ ತಿಂಗಳು 10 ಕೆ.ಜಿ. ಅಕ್ಕಿಯ ಭರವಸೆ ನೀಡಿದ್ದೇವೆ. ಇದೀಗ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಆಶ್ವಾಸನೆ ನೀಡುತ್ತಿದ್ದೇವೆ ಎಂದು ಹೇಳಿದರು.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, 2022 ರಲ್ಲಿ ರೈತರ ಆದಾಯ ದ್ವಿಗುಣ ಆಗುವ ಬದಲು, ಬೆಲೆ ಏರಿಕೆಯಿಂದ ರೈತರು ವ್ಯವಸಾಯಕ್ಕೆ ಮಾಡುವ ಖರ್ಚು ದುಪ್ಪಟ್ಟಾಗಿದೆ ಎಂದು ಟೀಕಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ ಇತರರು ಮಾತನಾಡಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

Leave a Reply

Your email address will not be published. Required fields are marked *

error: Content is protected !!