ಪ್ರತಿ ಬಿಪಿಎಲ್ ಕುಟುಂಬಕ್ಕೆ 2 ಸಾವಿರ: ಅಶೋಕ್

ಕಲಬುರಗಿ: ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳೂ 2000 ರೂ. ನೆರವು ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ 2000 ರೂ. ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು.

Leave a Reply

Your email address will not be published. Required fields are marked *

error: Content is protected !!