ತಂಬಾಕು ಕಾಯ್ದೆ ಉಲ್ಲಂಘನೆ 20 ಪ್ರಕರಣ ದಾಖಲು 

ದಾವಣಗೆರೆ : ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ಗ್ರಾಮಾಂತರ ಪ್ರದೇಶದಲ್ಲಿ ಶೈಕ್ಷಣಿಕ ಸಂಸ್ಥೆಗಳ 100 ಗಜದ ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತಿರುವುದು ಸಮೀಕ್ಷೆಯಿಂದ ತಿಳಿದು ಬಂದಿದ್ದು. ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003 ರ ಅಡಿಯಲ್ಲಿ ಹರಿಹರ ತಾಲ್ಲೂಕಿನ ಉಕ್ಕಡಗಾತ್ರಿ ಗ್ರಾಮಾಂತರ ಪ್ರದೇಶದ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತ ಹಾಗೂ ಇತರೆ ಅಂಗಡಿಗಳಲ್ಲಿ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವವರ ಮೇಲೆ ಸೆಕ್ಷನ್-4 ರ ಅಡಿಯಲ್ಲಿ 10 ಪ್ರಕರಣ, ಸೆಕ್ಷನ್-6ಎ ಅಡಿಯಲ್ಲಿ 2 ಪ್ರಕರಣ ದಂಡ ಒಟ್ಟು 12 ಪ್ರಕರಣ 1800 ರೂ ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಗಿದೆ.
ತಂಬಾಕು ತನಿಖಾ ತಂಡದಲ್ಲಿ ಜಿಲ್ಲಾ ಆರೋಗ್ಯ ಮೆಲ್ವಿಚಾರಕರಾದ ಎಂವಿ ಹೊರಕೇರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮ್ಮಣ್ಣ ಎಂ. ಆರ್.ಬಿ.ಎಸ್.ಕೆ ವೈದ್ಯಾಧಿಕಾರಿ ಡಾ|| ವಿಶ್ವನಾಥ ಹಾಗೂ ತಂಡ, ಬಿ.ಹೆಚ್.ಈ.ಓ ನಾಗರಾಜ್ ಟಿ, ಹಾಗೂ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ, ಹಾಗೂ ಇತರರು ತಂಡದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!