ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ: ಕಾಂಗ್ರೆಸ್ ಘೋಷಣೆ
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಯೋಜನೆ ಹೆಸರಿನಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2,000 ರೂ. ನೆರವು ನೀಡುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.
ಇಲ್ಲಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆಯುತ್ತಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿ ಇರುವ ಗೃಹಲಕ್ಷ್ಮಿ ಯೋಜನೆಯ ಚೆಕ್ ಪ್ರತಿಕೃತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಸಲ್ಲಿಸಿದರು.
ವೇದಿಕೆಯಲ್ಲಿ ಅನೇಕ ನಾಯಕರು, ಗೃಹಲಕ್ಷ್ಮಿ ಯೋಜನೆಯ ಘೋಷಣೆಯ ಭಿತ್ತಿಪತ್ರಗಳನ್ನು ಹಿಡಿದು ಭರವಸೆ ನೀಡಿದರು.