ತೊಗರಿ ಬೆಳೆ ನಷ್ಟಕ್ಕೆ 223 ಕೋಟಿ ರೂ. ಪರಿಹಾರ

ಬೆಂಗಳೂರು: ರಾಜ್ಯದ ಕೆಲ ಭಾಗಗಳಲ್ಲಿ ತೊಗರಿ ಬೆಳೆ ಹಾಳಾಗಿ ನಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ 223 ಕೋಟಿ ರೂ.ಗಳ ಪರಿಹಾರ ಪ್ರಕಟಿಸಿದೆ.
ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಆಗಿರುವ ನಷ್ಟವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಪ್ರತಿ ಎಕರೆ ನಷ್ಟಕ್ಕೆ 10 ಸಾವಿರ ರೂ.ಗಳಂತೆ ಗರಿಷ್ಠ ಎರಡು ಎಕರೆಗೆ ಪರಿಹಾರ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಳೆದ ನವೆಂಬರ್ ತಿಂಗಳಲ್ಲಿ ಭಾರೀ ಮಳೆಯಿಂದಾಗಿ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬೆಳೆಗೆ ತೀವ್ರ ಹಾನಿಯಾಗಿತ್ತು.