ದಾವಣಗೆರೆಯಲ್ಲಿ ಸಿಡಿಲು ಬಡಿದು 25 ಮೇಕೆ ಸಾವು
ದಾವಣಗೆರೆ: ಕಳೆದ ಮೂರ್ನಾಲ್ಕು ತಿಂಗಳಿಂದ ಬಿಸಿಲಿನ ಬೆಗೆಗೆ ತತ್ತರಿಸಿದ್ದ ಜನರಿಗೆ ವರುಣಾ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದ್ದಾನೆ. ಹೌದು ಮಾಯಕೊಂಡ ಸುತ್ತಾಮುತ್ತಲಿನ ಪ್ರದೇಶದಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಆದರೆ ವರ್ಷದ ಮೊದಲ ಮಳೆಗೆ ಆನಗೋಡು ಸಮೀಪದ ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು ಸುಮಾರು 25 ಕ್ಕೂ ಹೆಚ್ಚು ಮೇಕೆಗಳು ಸಿಡಿಲಿನ ಹೊಡೆತಕ್ಕೆ ಸಾವನ್ನಪ್ಪಿವೆ.
ಈಚಘಟ್ಟ ಗ್ರಾಮದ ರೈತ ಪಾಪ್ಯಾನಾಯ್ಕ ಅವ್ರು ಮೇಕೆಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದರು. ಈ ವೇಳೆ ಆರಂಭವಾದ ಮಳೆಗೆ ಮೇಕೆಗಳು ಮರದ ಕೆಳಗೆ ಬಂದು ನಿಂತಿವೆ. ಈ ಸಂದರ್ಭದಲ್ಲಿ ಸಿಡಿಲು ಬಡಿದು 16 ಹೆಣ್ಣು ಮೇಕೆ ಹಾಗೂ 9 ಗಂಡು ಮೇಕೆಗಳು ಮೃತಪಟ್ಟಿದ್ದು. ಪಾಪ್ಯಾನಾಯ್ಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಕೆ.ಎಸ್.ಬಸವಂತಪ್ಪ ಮೇಕೆ ಕಳೆದುಕೊಂಡ ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಈ ವೇಳೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳದಲ್ಲಿದ್ದರು.