ಭೂಮಿ ಖರೀದಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 25 ಲಕ್ಷ ಸಬ್ಸಿಡಿ ಸಾಲ

25 lakh subsidized loan from central government for land purchase
ತಮ್ಮದೇ ಆದ ಸ್ವಂತ ಭೂಮಿ ಹೊಂದಬೇಕು ಎಂದು ಎಷ್ಟೋ ಜನ ಕನಸು ಕಾಣುತ್ತಾರೆ. ಆದರೆ ಹಣವಿಲ್ಲದೆ ಕನಸು ನನಸಾಗೋದು ತುಂಬಾ ಕಷ್ಟ. ಆದರೆ ಇನ್ನು ಮುಂದೆ ಆ ಬಗ್ಗೆ ಚಿಂತಿಸುವ, ಕೊರಗುವ ಅಗತ್ಯವಿಲ್ಲ. ಭೂಮಿರಹಿತರಿಗೆ ಸರ್ಕಾರ ಭೂಮಿ ಖರೀದಿಗೆ ಸಾಲ ನೀಡಲು ಮುಂದಾಗಿದೆ. ಜೊತೆಗೆ ಸಬ್ಸಿಡಿ ಕೂಡ ನೀಡಲಿದೆ.
ಯಾವುದು ಈ ಯೋಜನೆ?
ಸರ್ಕಾರ ಜಾರಿಗೆ ತಂದಿರುವ ಭೂ ಒಡೆತನ ಯೋಜನೆ ಅಡಿಯಲ್ಲಿ ಭೂ ರಹಿತ ಮಹಿಳಾ ಕೃಷಿಕರು ತಾವು ವಾಸಿಸುವ ಸ್ಥಳದಿಂದ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 2 ಎಕರೆ ಖುಷ್ಕ ಅಥವಾ ಒಂದು ಎಕರೆ ತರಿ ಜಮೀನು ಖರೀದಿಸಲು ಸರ್ಕಾರ ಸಹಾಯಧನ ನೀಡುತ್ತದೆ.ಈ ಸಹಾಯಧನದ ಮೊತ್ತ 25 ಲಕ್ಷ ಹಾಗೂ 20 ಲಕ್ಷ ರೂಪಾಯಿ.
ಇದರಲ್ಲಿ 50% ನಷ್ಟು ಫಲಾನುಭವಿಗಳು ಪಾವತಿಸಿದರೆ ಇನ್ನು 50% ನಷ್ಟು ಸರ್ಕಾರ ಸಬ್ಸಿಡಿ ನೀಡುತ್ತದೆ. ಯೋಜನೆಯ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 25 ಲಕ್ಷ ರೂಪಾಯಿಗಳ ಸಾಲ ಹಾಗೂ ಇನ್ನುಳಿದ ಜಿಲ್ಲೆಗಳಿಗೆ 20 ಲಕ್ಷ ರೂಪಾಯಿಗಳ ಸಾಲವನ್ನು ಸರ್ಕಾರ ಮಂಜೂರು ಮಾಡಲಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು?
ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಅರ್ಜಿದಾರರ ಫೋಟೋ
ಕೃಷಿ ಕಾರ್ಮಿಕರ ದೃಢೀಕರಣ ಪತ್ರ ದಾಖಲೆಗಳು ಬೇಕು.
ಇನ್ನು ಹೆಚ್ಚಿನ ಮಾಹಿತಿಯನ್ನು ನೀವು ಆನ್ಲೈನ್ ಪೋರ್ಟಲ್ ಪರಿಶೀಲಿಸಬಹುದು.
ಅರ್ಜಿ ಸಲ್ಲಿಕೆ ಹೇಗೆ?
ಈ ಯೋಜನೆಗೆ ನೀವು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್ಸೈಟ್ https://sevasindhu.karnataka.gov.in/Sevasindhu/Kannada?ReturnUrl=%2F ಗೆ ಭೇಟಿ ನೀಡಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಯಾರೆಲ್ಲ ಅರ್ಹರು?
2023-24ನೇ ಸಾಲಿನ ಭೂ ಒಡೆತನ ಯೋಜನೆಗೆ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಸಮುದಾಯದವರು ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕವಾಗಿದೆ.