ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ದಾಂದಲೆ ಪ್ರಕರಣಗಳಲ್ಲಿ 25 ಜನ ಆರೋಪಿತರ ದಸ್ತಗಿರಿ

ದಾವಣಗೆರೆ: 24-05-2024 ರಾತ್ರಿ 08-00 ಗಂಟೆಗೆ ರಂದು ಆದಿಲ್ ತಂದೆ ಕಲಿಂಮುಲ್ಲಾ ಎಂಬ ವ್ಯಕ್ತಿಯ ಮಟಕಾ ಜೂಜಾಟದಲ್ಲಿ ನಿರತನಾಗಿರುವ ಕುರಿತು ಮಾಹಿತಿ ಬಂದ ಮೇರೆಗೆ ವಿಚಾರಣೆಗೆ ಠಾಣೆಗೆ ಕರೆತಂದಾಗ ಕುಸಿದು ಬಿದ್ದುವನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಒಳಪಡಿಸಿದಾಗ ಅವನು ಮೃತನಾಗಿದ್ದು, ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆ ಯುಡಿಆರ್ ನಂಬರ್ 17/2024 ಕಲಂ 174 ಸಿಆರ್.ಪಿ.ಸಿ 174, 176(1-ಎ) ರೀತ್ಯಾ ಪ್ರಕರಣ ದಾಖಲಾಗಿದ್ದು, ಇದನ್ನು ತಪ್ಪಾಗಿ ಗ್ರಹಿಸಿದ ಕುಟುಂಬಸ್ಥರು ಮತ್ತು ಸಮುದಾಯದವರು ಶವವನ್ನು ಇಟ್ಟು ಠಾಣೆಯಲ್ಲಿ ಪ್ರತಿಭಟನೆ ಮಾಡುತ್ತಿರುವಾಗ ಅದರಲ್ಲಿ ಉದ್ರಿಕ್ತ ಗುಂಪು ಪೊಲೀಸ್ರ ಮೇಲೆ ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸ್ ನವರಿಗೆ ಗಾಯಪಡಿಸಿ ಹಾಗೂ ಸರ್ಕಾರಿ ಸ್ವತ್ತುಗಳನ್ನು ದ್ವಂಸಗೊಳಿಸಿ ಕೃತ್ಯಕ್ಕೆ ಸಂಬಂಧಪಟ್ಟಂತೆ ಚನ್ನಗಿರಿ ಠಾಣೆಯಲ್ಲಿ06 ಪ್ರಕರಣಗಳು ದಾಖಲಾಗಿದ್ದು, ದಿನಾಂಕ: 25-05-2024 ರಂದು ಸದರಿ 06 ಪ್ರಕರಣಗಳ ಪೈಕಿ 04 ಪ್ರಕರಣಗಳಲ್ಲಿ 25 ಜನ ಆರೋಪಿತರುಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರ್ ಪಡಿಸಲಾಗಿರುತ್ತದೆ..


ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಂಪೂರ್ಣ ನಿಗಾವಹಿಸಿದ್ದು, ಕಾನೂನು & ಸುವ್ಯವಸ್ಥೆ ಕಾಪಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿರುತ್ತದೆ.

ಸಾರ್ವಜನಿಕರ ಗಮನಕ್ಕೆ : ಚನ್ನಗಿರಿಯಲ್ಲಿ ನಡೆದ ಘಟನೆಗೆ ಸಂಭAಧಿಸಿದAತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು & ಸುವ್ಯವಸ್ಥೆಗೆ ದಕ್ಕೆ ಬರುವಂತ ಧಾರ್ಮಿಕ ನಿಂಧನೆ/ವ್ಯಕ್ತಿ ನಿಂಧನೆ ಪೋಸ್ಟ್ಗಳು, ಪ್ರಚೋದನಾಕರಿ ಹೇಳಿಕೆಗಳು, ಪೋಸ್ಟ್ರ್ಗಳು, ವಿಡಿಯೋ ಹಾಗೂ ಪೋಟೋಗಳನ್ನು ಶೇರ್ ಮಾಡಬಾರದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು & ಸುವ್ಯವಸ್ಥೆಗೆ ದಕ್ಕೆ ಬರುವಂತ ಪೋಸ್ಟ್ ಮಾಡುವವರ ವಿರುಧ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!