ಪೊಲೀಸ್ ಇಲಾಖೆಯಲ್ಲಿ ಮಹಿಳೆಯರಿಗೆ ಶೇ.25ರಷ್ಟು ಮೀಸಲಾತಿ – ಆರಗ

ಪೊಲೀಸ್ ಇಲಾಖೆಯಲ್ಲಿ ಮಹಿಳೆ
ಬೆಂಗಳೂರು: 2020ರ ಫೆ.5ರಿಂದಲೇ ಪೊಲೀಸ್ ಇಲಾಖೆಯಲ್ಲಿ ಮಹಿಳೆಯರಿಗೆ ಶೇ.25ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಧಾನ ಪರಿಷತ್ ನಾಮ ನಿರ್ದೇಶನ ಸದಸ್ಯ ಯು.ಬಿ. ವೆಂಕಟೇಶ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಇಲಾಖೆಯಲ್ಲಿ ಮಹಿಳೆಯರಿಗೆ ಶೇ.25ರಷ್ಟು ಮೀಸಲಾತಿ ಕಲ್ಪಿಸಿ ನಿಯಮ ಹೊರಡಿಸಲಾಗಿದೆ.
2020ರ ಫೆ.5ರಿಂದಲೇ ಮೀಸಲಾತಿ ಕಲ್ಪಿಸಿ ಸರ್ಕಾರ ನಿಯಮ ರೂಪಿಸಲಾಗಿದೆ ಎಂದು ಲಿಖಿತ ಉತ್ತರ ನೀಡಿದ್ದಾರೆ.