ಮಾರ್ಚ್ 25 ರಂದು ದ್ವಿತೀಯ ಪಿಯುಸಿ ಪರೀಕ್ಷೆ-ಕೇಂದ್ರಕ್ಕೆ ಬೇಗ ಆಗಮಿಸಲು ವಿದ್ಯಾರ್ಥಿಗಳಿಗೆ ಸಾರ್ವಜನಿಕರು ಸಹಕರಿಸಲು ಜಿಲ್ಲಾಡಳಿತ ಮನವಿ

ದಾವಣಗೆರೆ : ಮಾರ್ಚ್ 25 ರಂದು ದಾವಣಗೆರೆ ಭಾರತದ ಪ್ರಧಾನ ಮಂತ್ರಿಗಳ ಪ್ರವಾಸ ಕಾರ್ಯಕ್ರಮ ಹಿನ್ನಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದ್ದು ಮಾರ್ಚ್ 25ರ ಶನಿವಾರ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಮುಂಚಿತವಾಗಿ ಆಗಮಿಸುವಂತೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ತಿಳಿಸಿದ್ದಾರೆ.
ಮಾರ್ಚ್ 25 ರಂದು ದ್ವಿತೀಯ ಪಿಯುಸಿ ರಾಜ್ಯ ಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ವಿಷಯ ಪರೀಕೆಗಳು ಜರುಗಲಿದ್ದು ಸಂಚಾರ ದಟ್ಟಣೆಯ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಬಸ್,ಆಟೋ, ಶಾಲಾ ವಾಹನಗಳು ಪರೀಕ್ಷಾ ಕೇಂದ್ರಕ್ಕೆ ಸಕಾಲದಲ್ಲಿ ತಲುಪುಲು ಯಾವುದೇ ತೊಂದರೆಯಾಗದಂತೆ ಅನುಕೂಲ ಮಾಡಿಕೊಡಲು ಸಾರ್ವಜನಿಕರಿಗೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.