ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 3.5 ತೀವ್ರತೆಯ ಭೂಕಂಪ
ವಿಜಯಪುರ : ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂಬುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ. ವಿಜಯಪುರ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ತಿಂಗಳುಗಳಿದ ಭೂಮಿ ಕಂಪಿಸಿದ ಅನುಭವ ಆಗುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಸುತ್ತಮುತ್ತಲ ಗ್ರಾಮಗಳಲ್ಲಿ ಇಂದು ಬೆಳಗ್ಗೆ 11.22ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಇಂದು ಬೆಳಗ್ಗೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪನವಾಗಿರುವ ಅನುಭವವಾಗಿದ್ದು, ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಇನ್ನು ವಿಜಯಪುರ ಜಿಲ್ಲೆಯಲ್ಲಿ ಕೆಲ ತಿಂಗಳುಗಳಿದ ಪದೇ ಪದೇ ಭೂಕಂಪನದ ಅನುಭವವಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.