37ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಆನಂತರ ಪತ್ರಿಕೆ ಬಿಡುಗಡೆಗೊಳಿಸಿದ ಡಿಸಿ, ಎಸ್ ಪಿ

ವಿಜಯಪುರ: ಐತಿಹಾಸಿಕ ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಫೆಬ್ರುವರಿ 4 ಮತ್ತು 5 ರಂದು ನಡೆಯಲಿರುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಭರದ ಸಿದ್ಧತೆಗಳು ನಡೆದಿದ್ದು, ಸಮ್ಮೇಳನದ ವರ್ಣರಂಜಿತ ಆಕರ್ಷಕ ಆಮಂತ್ರಣ ಪತ್ರಿಕೆಗಳನ್ನು ಶನಿವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಪ್ರತ್ಯೇಕವಾಗಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ‌ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಮಾತನಾಡಿ, ಐತಿಹಾಸಿಕ ವಿಜಯಪುರ ನಗರದಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಲೆಂದು ಶುಭಕೋರಿದರು.

ಸಮ್ಮೇಳನದ ಯಶಸ್ವಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.

ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಮಾತನಾಡಿ, ವಿಜಯಪುರದಲ್ಲಿ ಪ್ರಪ್ರಥಮ ಬಾರಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಐದು ಸಾವಿರಕ್ಕೂ ಅಧಿಕ ಪತ್ರಕರ್ತರು ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಎರಡೂವರೆ ಸಾವಿರ ಪತ್ರಕರ್ತರು ನೊಂದಣಿ ಮಾಡಿಸಿದ್ದಾರೆ. ಸಮ್ಮೇಳನಕ್ಕೆ ದೂರದ ಊರುಗಳಿಂದ ಆಗಮಿಸುವ ಪತ್ರಕರ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕಾಗಿದ್ದು, ಜಿಲ್ಲಾಡಳಿತ ಎಲ್ಲ ರೀತಿಯ ಸಹಕಾರ ನೀಡಬೇಕೆಂದು ಕೋರಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿ ರಾಹುಲ ಆಪ್ಟೆ, ಸಹ ಖಜಾಂಚಿ ದೀಪಕ ಶಿಂತ್ರೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸುರೇಶ ತೇರದಾಳ, ಸಮೀರ್ ಇನಾಮದಾರ, ಸಂಘದ ಸದಸ್ಯರಾದ ಸೀತಾರಾಮ ಕುಲಕರ್ಣಿ, ದೇವೇಂದ್ರ ಹೆಳವರ, ನಿಂಗಪ್ಪ ನಾವಿ, ಪ್ರದೀಪ ಕುಲಕರ್ಣಿ, ಶ್ರೀನಿವಾಸ ಸೂರಗೊಂಡ, ಇಸ್ಮಾಯಿಲ್ ಮುಲ್ಲಾ, ವಿಠ್ಠಲ ಲಂಗೋಟಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ ಹಾಗೂ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!