ಕಾರ್ಯನಿರತ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನ: ಮೆರವಣಿಗೆಗೆ ಚಾಲನೆ

Working Papers 37th State Conference: On the march

37ನೇ ರಾಜ್ಯ ಸಮ್ಮೇಳನ

ವಿಜಯಪುರ :ಪತ್ರಕರ್ತರ 37 ನೇ ರಾಜ್ಯ ಸಮ್ಮೇಳನವು ಐತಿಹಾಸಿಕ ಗುಮ್ಮಟ ನಗರಿಯಲ್ಲಿ ಆರಂಭವಾಗಿದ್ದು, ಸಮ್ಮೇಳನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಗೆ ರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.
ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ ವೇಷ ಭೂಷಣ ತೊಟ್ಟ ಜಾನಪದ ಕಲಾ ತಂಡಗಳು, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.
ಮೆರವಣಿಗೆಯೂ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿಚೌಕಿ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಮ್ಮೇಳನ ನಡೆಯಲಿರುವ ಕಂದಗಲ್ ಹಣಮಂತರಾಯ ರಂಗಮಂದಿರ ತಲುಪಿತು.


ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ,  ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು,  ಮತ್ತೀಕೆರೆ ಜಯರಾಮ, ನಿಂಗಪ್ಪ ಚಾವಡಿ, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಅಜ್ಜಮಾಡ ರಮೇಶ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಖಚಾಂಚಿ ವಾಸುದೇವ ಹೊಳ್ಳ, ವಿಜಯಪುರ  ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ್‌ ಕುಲಕರ್ಣಿ, ಇಂದು ಶೇಖರ ಮಣೂರ, ಫಯಾಜ್ ಕಲಾದಗಿ, ಶರಣು ಸಬರದ, ಡಿ.ಬಿ.ವಡವಡಗಿ ಇದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!