ದಾವಣಗೆರೆ ಜಿಲ್ಲೆಯಾದ್ಯಂತ ಮಾರ್ಚ್ 15 ಬೆಳಗ್ಗೆ 6 ಗಂಟೆಯಿಂದ – ಮಾರ್ಚ್ 19 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ – ಮಹಾಂತೇಶ ಬೀಳಗಿ
ದಾವಣಗೆರೆ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ತೀರ್ಪು ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮಾ.೧೫ರಂದು ಬೆಳಗ್ಗೆ ೬ ಗಂಟೆಯಿಂದ ಮಾ.೧೯ರ ಬೆಳಗ್ಗೆ ೬ ಗಂಟೆವರೆಗೆ ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಸೆಕ್ಷನ್ ೧೪೪ರನ್ವಯ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ. ನಿಷೇಧಾಜ್ಞೆ ಅವಧಿಯಲ್ಲಿ ಯಾವುದೇ ಧರ್ಮ, ಸಂಘಟನೆಗಳ ಮುಖಂಡರು ಶಾಲಾ-ಕಾಲೇಜು ಆವರಣದೊಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಕರು/ ಶಿಕ್ಷಕಿಯರು ಮತ್ತು ಸಿಬ್ಬಂದಿ ಹೊರತುಪಡಿಸಿ, ಅನಿವಾರ್ಯ ಸಂದರ್ಭಗಳಲ್ಲಿ ಪೋಷಕರಿಗೆ ಮಾತ್ರ ಪ್ರವೇಶಿಸಲು ಅವಕಾಶವಿರುತ್ತದೆ. ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ.
ಕಾನೂನು ಭಂಗ ಉಂಟುಮಾಡುವ ಉದ್ದೇಶದಿಂದ ೫ ಮತ್ತು ಅದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಭಂಧಿಸಿದೆ. ಯಾವುದೇ ಮೆರವಣಿಗೆ, ಸಭೆ-ಸಮಾರಂಭ, ವಿಜಯೋತ್ಸವ ಮತ್ತಿತರೆ ಸಾರ್ವಜನಿಕ ಸಮಾವೇಶಗಳನ್ನು ಸಹ ನಿಷೇಧಿಸಿದೆ. ಶಸ್ತ್ರ, ಮಾರಾಕಾಸ್ತ್ರ, ಸ್ಫೋಟಕ ವಸ್ತುಗಳ ಒಯ್ಯುವಿಕೆ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿ, ಶವಗಳ ಪ್ರತಿಕೃತಿ ಪ್ರದರ್ಶನ, ಪ್ರಚೋದನಾಕಾರಿ ಬಹಿರಂಗ ಘೋಷಣೆ, ಸಂಗೀತ, ನೃತ್ಯ, ಭಿತ್ತಿಪತ್ರ ಪ್ರದರ್ಶಿಸುವುದು ಸೇರಿದಂತೆ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವ, ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆ ನಿಷೇಧಿಸಿದೆ. ಯಾವುದೇ ವ್ಯಕ್ತಿಯ ಜಾತಿ, ಕೋಮು, ಪಂಥಗಳಿಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆ, ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಅವಹೇಳನಕಾರಿ ಘೋಷಣೆ, ಭಾಷಣ, ಪ್ರಕಟಣೆ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್ ವಿವಾದವು ಈಗಾಗಲೇ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಮಾನ್ಯ ನ್ಯಾಯಾಲಯವು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ 15.03.2022 ರಂದು ತೀರ್ಪು ನೀಡುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 15.03.2022 ರಂದು ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ 19.03.2022 ರಂದು ಬೆಳಿಗ್ಗೆ 6.00 ಗಂಟೆಯವರೆಗೆ ಭಾರತೀಯ ದಂಡ ಸಂಹಿತೆ 1973ರ ಕಲಂ 144 ರನ್ವಯ ನಿಷೇದಾಜ್ಞೆ ಜಾರಿಗೊಳಿಸುವುದು ಅವಶ್ಯವೆಂದು ಮನವರಿಕೆಯಾಗಿರುವ ಹಿನ್ನಲೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ.
ಆದೇಶ:
ಪ್ರಸ್ತವಾನೆಯಲ್ಲಿ ವಿವರಿಸಿರುವ ಕಾರಣಗಳಿಂದ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಲಂ144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮಹಾಂತೇಶ ಬೀಳಗಿ ಭಾ.ಆ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಾವಣಗೆರೆ ಜಿಲ್ಲೆ ಆದ ನಾನು ಪ್ರಸ್ತುತ ಪರಿಸ್ಥಿಯನ್ನು ಅವಲೋಕಿಸಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 15.03.2022 ರಂದು ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ 19.03.2022 ರಂದು ಬೆಳಿಗ್ಗೆ 6.00 ಗಂಟೆಯವರೆಗೆ ಈ ಕೆಳಕಂಡ ನಿಬಂಧನೆಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿರುತ್ತೇನೆ.
ನಿಬಂಧನೆಗಳು:
1. ಯಾವುದೇ ಧರ್ಮದ / ಯಾವುದೇ ಸಂಘಟನೆಗಳ ಮುಖಂಡರುಗಳು ಮತ್ತು ನಾಯಕರುಗಳು ಶಾಲಾ ಕಾಲೇಜುಗಳ ಅವರಣದೊಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
2. ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು/ಶಿಕ್ಷಕಿಯರು ಮತ್ತು ಕಾಲೇಜು ಸಿಬ್ಬಂಧಿಗಳು ಹೊರತುಪಡಿಸಿ ಅನಿವಾರ್ಯ ಸಂದರ್ಭಗಳಲ್ಲಿ ಪೋಷಕರಿಗೆ ಮಾತ್ರ ಪ್ರವೇಶಿಸಲು ಅವಕಾಶವಿರುತ್ತದೆ. 3, ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ.
3. ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ.
4. ಪ್ರಸ್ತಾವನೆಯಲ್ಲಿನ ಅಂಶಗಳಿಗೆ ಸಂಬಂಧಿಸಿದಂತೆ ಕಾನೂನು ಭಂಗ ಉಂಟುಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಭಂಧಿಸಿದೆ. ಯಾವುದೇ ಮೆರವಣಿಗೆ ಮತ್ತು ಸಭೆ ಸಮಾರಂಭಗಳನ್ನು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ಸಹ ನಿಷೇಧಿಸಿದೆ.
5. ಶಸ್ತ್ರಗಳನ್ನು, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಇನ್ನು ಮುಂತಾದ ಮರಾಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆ ಉಂಟುಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ಶೇಖರಿಸುವುದನ್ನು ನಿಷೇಧಿಸಿದೆ. 6. ಯಾವುದೇ ಸ್ಫೋಟಕ ವಸ್ತುಗಳನ್ನು (ಪಟಾಕಿ/ಸಿಡಿಮದ್ದು) ಬಳಸುವುದು,ಕಲ್ಲುಗಳನ್ನು, ಎಸೆಯುವ
ಸಾಧನಗಳನ್ನು/ ಉಪಕರಣಗಳ ಒಯ್ಯುವಿಕ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
7. ಯಾವುದೇ ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದಂತಹ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಸ್ಥೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿದೆ.
& ಯಾವುದೇ ಖಾಸಗಿ/ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವ ಮತ್ತು ವಿರೂಪಗೊಳಿಸುವ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿದ.
9. ಯಾವುದೇ ವ್ಯಕ್ತಿಯ ಜಾತಿ/ಧರ್ಮ/ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ
ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.
10. ಸರ್ಕಾರಿ ಸಂಸ್ಥೆಗಳು/ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ನಿಂಧಿಸುವಂತಹ ಅವಹೇಳನಕಾರಿಯಾದಂತಹ ಯಾವುದೇ ಘೋಷಣೆಗಳು/ ಭಾಷಣಗಳು ಪ್ರಕಟಣೆಗಳು/ ಅವಾಚ್ಯ ಶಬ್ದಗಳ ಬಳಕೆ/ಪ್ರಚೋದನಾಕಾರಿ ಭಾಷಣ/ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ.