ಬರಿಗಣ್ಣಿನಲ್ಲಿ 42 ನಿಮಿಷ ಸೂರ್ಯನ ವೀಕ್ಷಿಸಿ ದಾಖಲೆ

ಮೈಸೂರು: ಉರಿಬಿಸಿಲಿನಲ್ಲೇ ಬರಿಗಣ್ಣಿನಲ್ಲಿ 42 ನಿಮಿಷಗಳ ಕಾಲ ಸೂರ್ಯನನ್ನು ನೋಡಿ ಇಲ್ಲೊಬ್ಬರು ದಾಖಲೆ ಮಾಡಿದ್ದಾರೆ.
ಹೌದು, ಇಲ್ಲಿನ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಬದರಿ ನಾರಾಯಣ್‌ ಎಂಬುವವರು ಮಂಗಳವಾರ ಪ್ರಾಣಾಯಾಮ ಮಾಡುತ್ತಾ ಬರಿಗಣ್ಣಿನಲ್ಲಿ ಸೂರ್ಯ ವಿಕ್ಷಿಸಿ ದಾಖಲೆ ನಿರ್ಮಿಸಿದ್ದಾರೆ.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ಪ್ರಕ್ರಿಯೆಗೆ ಸೂರ್ಯ ಕಿರಣ ಕ್ರಿಯೆ ಎಂದು ಹೇಳುತ್ತೇವೆ. ಸೂರ್ಯನನ್ನು ನೇರವಾಗಿ ನೋಡುವುದು ಅಪಾಯಕಾರಿ. ಆದರೆ, ನಿರಂತರ ಪ್ರಾಣಾಯಾಮದ ಜೊತೆಗಿನ ಅಭ್ಯಾಸದ ಮೂಲಕ ನಾನು ಈ ಸಾಧನೆ ಮಾಡಿದ್ದೇನೆ. ಹೀಗಾಗಿ ಇದನ್ನು ಯಾರೂ ಪ್ರಯತ್ನಿಸಬಾರದು ಎಂದು ಹೇಳಿದ್ದಾರೆ.
ಈ ಯೋಗಕ್ಕೆ ತ್ರಾಟಕ ಕ್ರಿಯೆ ಎನ್ನುತ್ತಾರೆ. ಇದನ್ನು ಹಠ ಯೋಗಿಗಳು ಮಾತ್ರ ಸಾಧಿಸಲು ಸಾಧ್ಯ ಯೋಗ ಗುರು ಕೆ.ರಾಘವೇಂದ್ರ ಪೈ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!