ಜಿಎಂಎಸ್ ಕಾಲೇಜಿನ 42 ವಿದ್ಯಾರ್ಥಿಗಳು ಫೊಕಸ್ ಎಜುಮ್ಯಾಟಿಕ್ಸ್ ಕಂಪನಿಗೆ ಸಂದರ್ಶನದಲ್ಲಿ ಆಯ್ಕೆ
ದಾವಣಗೆರೆ: ನಗರದ ಪ್ರತಿಷ್ಠಿತ ಜಿ ಎಂ ಎಸ್ ಅಕ್ಯಾಡೆಮಿ ಫಸ್ಟ್ ಗ್ರೇಡ್ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ ಮತ್ತು ಬಿಸಿಎ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಫೋಕಸ್ ಎಜುಮ್ಯಾಟಿಕ್ಸ್ ಎಂಬ ಕಂಪನಿಯ ಸಂದರ್ಶನದಲ್ಲಿ ಒಟ್ಟು 42 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶ್ವೇತ ಮರಿಗೌಡರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ಉದ್ಯೋಗ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೈಗಾರಿಕಾ ಕೌಶಲ್ಯತೆ ಗಳ ಬಗ್ಗೆ ಮತ್ತು ಕಂಪನಿ ಸಂದರ್ಶನವನ್ನು ಎದುರಿಸುವ ಬಗ್ಗೆ ನೈಪುಣ್ಯತೆಯನ್ನು ಪಡೆದಿದ್ದರು. ತರಬೇತಿ ಕಾರ್ಯಕ್ರಮದ ನಂತರ ಇದೇ ಮೊದಲ ಬಾರಿ ವಿದ್ಯಾರ್ಥಿಗಳು ಸಂದರ್ಶನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಯಶಸ್ವಿಯಾಗಿ ಎದುರಿಸಿ ಕಂಪನಿಗೆ ಆಯ್ಕೆಯಾಗಿದ್ದಾರೆ ಎಂದು ಜಿಎಂಎಸ್ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಶ್ರೀ ಶಾಂತಕುಮಾರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಕಂಪನಿಗಳು ಸಂದರ್ಶನ ಪ್ರಕ್ರಿಯೆಯನ್ನು ನಡೆಸಲಿದ್ದು, ವಿದ್ಯಾರ್ಥಿಗಳು ತಮ್ಮ ನೈಪುಣ್ಯತೆಯನ್ನು ಪ್ರದರ್ಶಿಸಬೇಕೆಂದು ಕಾಲೇಜಿನ ಸಹಾಯಕ ಆಡಳಿತಾಧಿಕಾರಿ ಶ್ರೀ ಶಿವಕುಮಾರ್ ಜಿ ಜೆ ತಿಳಿಸಿದ್ದಾರೆ.
ಕಂಪನಿಗಳಾದ ಓಜಿ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್, ಕರಿಯರ್ ಲ್ಯಾಬ್, ತಸ್ಮೈ ಅಟೋಮೇಶನ್, ರಿಲಯನ್ಸ್, ಕೋಟಕ್ ಮಹಿಂದ್ರ ಇನ್ನು ಮುಂತಾದ ಕಂಪನಿಗಳು ಬರಲಿದ್ದು, ವಿದ್ಯಾರ್ಥಿಗಳಿಗೆ ಸಂದರ್ಶನ ಪ್ರಕ್ರಿಯೆಯನ್ನು ನಡೆಸಲಿವೆ ಎಂದು ಇದೇ ವೇಳೆ ತಿಳಿಸಿದರು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ ಶ್ರೀ ಜಿಎಂ ಲಿಂಗರಾಜು, ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಶ್ಚಂದ್ರ, ಜಿಎಂಐಟಿ ಕಾಲೇಜಿನ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ವಿವಿಧ ವಿಭಾಗದ ಮುಖ್ಯಸ್ಥರು ಗಳು ಮತ್ತು ಪ್ರಾಧ್ಯಾಪಕ ವರ್ಗದವರು ಅಭಿನಂದನೆಯನ್ನು ತಿಳಿಸಿದ್ದಾರೆ.