ಜಿಎಂಐಟಿ ಕಾಲೇಜಿನ 42 ವಿದ್ಯಾರ್ಥಿಗಳು ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಗೆ ಆಯ್ಕೆ ಇಲ್ಲಿಯವರೆಗೂ ಒಟ್ಟು 515 ವಿದ್ಯಾರ್ಥಿಗಳು ಆಯ್ಕೆ
ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಐಡಿಎಫ್ ಸಿ ಫಸ್ಟ್ ಬ್ಯಾಂಕ್ ನ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 42 ವಿದ್ಯಾರ್ಥಿಗಳು ಆಯ್ಕೆಯಾಗುವುದರ ಮೂಲಕ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದುವರೆಗೂ ಒಟ್ಟು 515 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದು, ಇನ್ನು ಅನೇಕ ಕಂಪನಿಗಳ ಸಂದರ್ಶನ ಪ್ರಕ್ರಿಯೆ ನಡೆಯಲಿದ್ದು, ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಪ್ರೊ ತೇಜಸ್ವಿ ಕಟ್ಟಿಮನಿ ಟಿಆರ್ ತಿಳಿಸಿದರು.
ಬಾಷ್ ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್, ಒಮೆಗಾ ಹೆಲ್ತ್ ಕೇರ್, ಆಪ್ಟಮ್, ಟೆಸ್ಟ್ ಯಂತ್ರ ಸಾಫ್ಟ್ವೇರ್ ಸೊಲ್ಯೂಷನ್ಸ್, ಏಶಿಯನ್ ಪೇಂಟ್ಸ್ ಲಿಮಿಟೆಡ್ ಕಂಪನಿಗಳ ಸಂದರ್ಶನ ಪ್ರಕ್ರಿಯೆಯು ಜಾರಿಯಲ್ಲಿದ್ದು, ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ ಎಂದು ಇದೇ ವೇಳೆ ತಿಳಿಸಿದರು.
ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಈಗಾಗಲೇ ಎಲ್ಲಾ ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿ, ಶೇಕಡ 100ರ ಪ್ಲೇಸ್ಮೆಂಟ್ ಆಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇನ್ನೂ ಕಂಪನಿಗಳ ಅವಕಾಶಗಳು ದೊರೆಯಲಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಕಂಪನಿ ಆಫರ್ ಪಡೆಯಲಿದ್ದಾರೆ ಎಂದು ತಿಳಿಸಿದರು.
ಐಟಿ ವಲಯದಲ್ಲಿರುವ ಆರ್ಥಿಕ ಹಿಂಜರಿತದ ಸಮಯದಲ್ಲೂ, ವಿದ್ಯಾರ್ಥಿಗಳಿಗೆ ಹೆಚ್ಚಿನ ಕಂಪನಿಗಳ ಅವಕಾಶಗಳನ್ನು ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ನಡೆಸಲಾಗುತ್ತಿದೆ ಎಂದು ಕಾಲೇಜಿನ ಆಡಳಿತಾಧಿಕಾರಿ ಶ್ರೀ ಸುಭಾಷ್ ಚಂದ್ರ ವೈ ಯು ತಿಳಿಸಿದರು.
ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೂ ಕಾಲೇಜಿನ ಚೇರ್ಮನ್ ಶ್ರೀ ಜಿಎಂ ಲಿಂಗರಾಜು, ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಅಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.