ಜಿಎಂಐಟಿ : ಬಯೋಟೆಕ್ನಾಲಜಿ ಮತ್ತು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ 45 ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಆಯ್ಕೆ

ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಎರಡು ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿಇಂಜಿನಿಯರಿಂಗ್ನ ಬಯೋಟೆಕ್ನಾಲಜಿ ಮತ್ತು ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದಿಂದ ಒಟ್ಟು 45 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂ ಬಿ ಪತ್ರಿಕಾ ಪ್ರಕಟಣೆಯಲ್ಲಿತಿಳಿಸಿದ್ದಾರೆ.


ಆಪ್ಟಮ್ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಬಯೋಟೆಕ್ನಾಲಜಿ ವಿಭಾಗದ 15 ವಿದ್ಯಾರ್ಥಿಗಳು ಮತ್ತುಪೇಸ್ ಪವರ್ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದಿಂದ 30 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 45 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಇದುವರೆಗೂ ಒಟ್ಟು 622 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದಾರೆ. ಇನ್ನೂ ಹಲವು ಪ್ರತಿಷ್ಠಿತಕಂಪನಿಗಳ ಸಂದರ್ಶನ ಪ್ರಕ್ರಿಯೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ರೀತಿಯ ತರಬೇತಿ ಮತ್ತು ಸಹಕಾರ ನೀಡುವ ಜವಾಬ್ದಾರಿ ಹೊಂದಿದ್ದೇವೆ. ಹಾಗೂ ಪ್ರಸ್ತುತ ಆರ್ಥಿಕ ಹಿಂಜರಿತದಿಂದ ಎದುರಾಗಿರುವ ಆರ್ಥಿಕ ಸವಾಲುಗಳ ಹೊರತಾಗಿಯೂ ನಮ್ಮ ಕಾಲೇಜು ತನ್ನ ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳನ್ನು ಕೊಡಿಸುವಲ್ಲಿ ಗಮನಾರ್ಹ ಯಶಸ್ಸನ್ನು ಕಂಡಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.


ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಶ್ರೀ ಜಿಎಂ ಲಿಂಗರಾಜು, ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಷ್ಚಂದ್ರ , ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥರಾದ ಡಾ ಪ್ರಕಾಶ್ ಕೆ ಕೆ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ವಿಭಾಗದ ಮುಖ್ಯಸ್ಥರಾದ ಡಾ ಪ್ರವೀಣ್ ಜೆ, ಪ್ಲೇಸ್ಮೆಂಟ್ ಸಂಯೋಜಕರುಗಳಾದ ಪ್ರೊ ಸುಪ್ರೀತ್ ಮತ್ತು ಪ್ರೊ ರಾಕೇಶ್ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!